ತಮಿಳು ಚಿತ್ರರಂಗದ ಸೂಪರ್ ಸ್ಟಾರ್, ಡಿಎಂಡಿಕೆ ನಾಯಕ ವಿಜಯಕಾಂತ್ (71) ಅವರು ಗುರುವಾರ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.ಕೋವಿಡ್ ಸೋಂಕಿಗೆ ತುತ್ತಾಗಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿತ್ತು ಆದರೆ ಇಂದು ಬೆಳಿಗ್ಗೆ ನಿಧನ ಹೊಂದಿರುವುದಾಗಿ ಕುಟುಂಬ ಮೂಲಗಳು ಮಾಹಿತಿ ನೀಡಿವೆ.ಆಸ್ಪತ್ರೆಯ ಮೂಲಗಳ ಪ್ರಕಾರ ವಿಜಯಕಾಂತ್ ಅವರು ನ್ಯುಮೋನಿಯಾಕ್ಕೆ ತುತ್ತಾಗಿದ್ದರು ಇದರಿಂದ ಅವರಿಗೆ ವೆಂಟಿಲೇಟರ್ ಮೂಲಕ ಚಿಕಿತ್ಸೆ ನೀಡಲಾಗುತಿತ್ತು. ವೈದ್ಯಕೀಯ ಸಿಬ್ಬಂದಿಯ ಅತ್ಯುತ್ತಮ ಪ್ರಯತ್ನಗಳ ಹೊರತಾಗಿಯೂ ಇಂದು (ಗುರುವಾರ) ಬೆಳಿಗ್ಗೆ ಚಿಕಿತ್ಸೆ ಫಲಿಸದೆ ನಿಧನ ಹೊಂದಿದರು ಎಂದಿದ್ದಾರೆ.ವಿಜಯಕಾಂತ್ ಅವರ ಚಲನಚಿತ್ರ ಪಯಣ ಅದ್ಭುತವಾಗಿತ್ತು ಮತ್ತು ಅವರು ಅನೇಕ ಹಿಟ್ ಚಿತ್ರಗಳನ್ನು ನೀಡಿದ್ದು 154 ಚಿತ್ರಗಳಲ್ಲಿ ನಟಿಸಿದ್ದಾರೆ. ಚಲನಚಿತ್ರಗಳ ನಂತರ ಅವರು ರಾಜಕೀಯಕ್ಕೆ ಸೇರಿದರು, ಅವರು ಡಿಎಂಡಿಕೆ ಸ್ಥಾಪಿಸಿದರು, ಎರಡು ಬಾರಿ ವಿಧಾನಸಭೆಯ ಸದಸ್ಯರಾಗಿ ಸೇವೆ ಸಲ್ಲಿಸಿದರು.ಅವರು 2011 ರಿಂದ 2016 ರವರೆಗೆ ತಮಿಳುನಾಡು ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾದಾಗ ಅವರ ರಾಜಕೀಯ ಜೀವನ ಉತ್ತುಂಗದಲ್ಲಿತ್ತು. ಇತ್ತೀಚಿನ ವರ್ಷಗಳಲ್ಲಿ ವಿಜಯಕಾಂತ್ ಅವರ ಆರೋಗ್ಯ ಸ್ಥಿತಿ ಸರಿ ಇರದ ಕಾರಣ ರಾಜಕೀಯದಿಂದ ದೂರ ಉಳಿಯುವಂತೆ ಮಾಡಿತ್ತು.
Friday, 29 December 2023
ತಮಿಳು ನಟ, ಡಿಎಂಡಿಕೆ ನಾಯಕ ವಿಜಯಕಾಂತ್ ವಿಧಿವಶ.
ತಮಿಳು ಚಿತ್ರರಂಗದ ಸೂಪರ್ ಸ್ಟಾರ್, ಡಿಎಂಡಿಕೆ ನಾಯಕ ವಿಜಯಕಾಂತ್ (71) ಅವರು ಗುರುವಾರ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.ಕೋವಿಡ್ ಸೋಂಕಿಗೆ ತುತ್ತಾಗಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿತ್ತು ಆದರೆ ಇಂದು ಬೆಳಿಗ್ಗೆ ನಿಧನ ಹೊಂದಿರುವುದಾಗಿ ಕುಟುಂಬ ಮೂಲಗಳು ಮಾಹಿತಿ ನೀಡಿವೆ.ಆಸ್ಪತ್ರೆಯ ಮೂಲಗಳ ಪ್ರಕಾರ ವಿಜಯಕಾಂತ್ ಅವರು ನ್ಯುಮೋನಿಯಾಕ್ಕೆ ತುತ್ತಾಗಿದ್ದರು ಇದರಿಂದ ಅವರಿಗೆ ವೆಂಟಿಲೇಟರ್ ಮೂಲಕ ಚಿಕಿತ್ಸೆ ನೀಡಲಾಗುತಿತ್ತು. ವೈದ್ಯಕೀಯ ಸಿಬ್ಬಂದಿಯ ಅತ್ಯುತ್ತಮ ಪ್ರಯತ್ನಗಳ ಹೊರತಾಗಿಯೂ ಇಂದು (ಗುರುವಾರ) ಬೆಳಿಗ್ಗೆ ಚಿಕಿತ್ಸೆ ಫಲಿಸದೆ ನಿಧನ ಹೊಂದಿದರು ಎಂದಿದ್ದಾರೆ.ವಿಜಯಕಾಂತ್ ಅವರ ಚಲನಚಿತ್ರ ಪಯಣ ಅದ್ಭುತವಾಗಿತ್ತು ಮತ್ತು ಅವರು ಅನೇಕ ಹಿಟ್ ಚಿತ್ರಗಳನ್ನು ನೀಡಿದ್ದು 154 ಚಿತ್ರಗಳಲ್ಲಿ ನಟಿಸಿದ್ದಾರೆ. ಚಲನಚಿತ್ರಗಳ ನಂತರ ಅವರು ರಾಜಕೀಯಕ್ಕೆ ಸೇರಿದರು, ಅವರು ಡಿಎಂಡಿಕೆ ಸ್ಥಾಪಿಸಿದರು, ಎರಡು ಬಾರಿ ವಿಧಾನಸಭೆಯ ಸದಸ್ಯರಾಗಿ ಸೇವೆ ಸಲ್ಲಿಸಿದರು.ಅವರು 2011 ರಿಂದ 2016 ರವರೆಗೆ ತಮಿಳುನಾಡು ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾದಾಗ ಅವರ ರಾಜಕೀಯ ಜೀವನ ಉತ್ತುಂಗದಲ್ಲಿತ್ತು. ಇತ್ತೀಚಿನ ವರ್ಷಗಳಲ್ಲಿ ವಿಜಯಕಾಂತ್ ಅವರ ಆರೋಗ್ಯ ಸ್ಥಿತಿ ಸರಿ ಇರದ ಕಾರಣ ರಾಜಕೀಯದಿಂದ ದೂರ ಉಳಿಯುವಂತೆ ಮಾಡಿತ್ತು.
Sunday, 17 December 2023
ಉಡುಪಿಲೀಲಾಧರ ಶೆಟ್ಟಿ ದಂಪತಿ ಆತ್ಮಹತ್ಯೆ: ಸಾಕು ಮಗಳನ್ನು ಕರೆದೊಯ್ದ ಪ್ರೇಮಿ,ನೆರವಾದ ಆರೋಪಿಗಳ ಬಂಧನ.
ಸಾಕು ಮಗಳು ಮನೆಯಿಂದ ನಾಪತ್ತೆಯಾದ ಕಾರಣ ಮನನೊಂದು ನೇಣಿಗೆ ಶರಣಾದ ಸಮಾಜ ಸೇವಕ ಕೆ.ಲೀಲಾಧರ ಶೆಟ್ಟಿ ದಂಪತಿಯ ಸಾವಿಗೆ ಕಾರಣರಾದ ಸಾಕು ಪುತ್ರಿಯನ್ನು ಕಾಪು ಪೊಲೀಸರು ಕುಂಬಳೆಯಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ.ಅಪ್ರಾಪ್ತ ವಯಸ್ಸಿನ ಸಾಕು ಮಗಳು, ಆಕೆಯ ಪ್ರಿಯಕರ ಮತ್ತು ಆತನಿಗೆ ನೆರವಾದ ಇತರ ಮೂವರನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ಮುಂದುವರಿಸಿದ್ದಾರೆ.ಬಾಲಕಿಯ ಪ್ರಿಯಕರ ಶಿರ್ವ ನಿವಾಸಿ ಗಿರೀಶ್, ಆತನಿಗೆ ನೆರವಾದ ರೂಪೇಶ್, ಅಜೀಜ್ ಮತ್ತು ಜಯಂತ್ ಪೊಲೀಸ್ ಬಂಧಿತರು. ಬಂಧಿತರನ್ನು ತೀವ್ರ ವಿಚಾರಣೆಗೊಳಪಡಿಸಿರುವ ಪೊಲೀಸರು ಎರಡು ಸ್ಕೂಟಿಗಳನ್ನು ವಶಪಡಿಸಿಕೊಂಡಿದ್ದಾರೆ.
Saturday, 16 December 2023
KSRTC ಟ್ರೇಡ್‌ಮಾರ್ಕ್ ವಿವಾದ; ಇನ್ಮೇಲೆ KSRTC ಹೆಸರು ಕೇರಳ ಬಳಸುವಂತಿಲ್ಲ..! ಕರ್ನಾಟಕಕ್ಕೆ ಜಯ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳಿಗೆ KSRTC ಹೆಸರು ಬಳಕೆ ಮಾಡುತ್ತಿರುವುದನ್ನು ಪ್ರಶ್ನಿಸಿ ಕೇರಳ RTC ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ವಜಾಗೊಳಿಸಿದ್ದು, ಹೆಸರು ಬಳಕೆಗೆ ಯಾವುದೇ ಅಭ್ಯಂತರವಿಲ್ಲ ಎಂದು ನ್ಯಾಯಾಲಯ ಹೇಳಿದೆ. ಕರ್ನಾಟಕ ಕೆಣಕಿ ಕೇರಳ ಸೋತಿದ್ದು, KSRTC ಇನ್ಮುಂದೆ ನಮ್ದೇ. KSRTC ಹೆಸರು ಕೇರಳ ಇನ್ಮೇಲೆ ಬಳಸುವಂತಿಲ್ಲ. ಕರ್ನಾಟಕ KSRTC ಟ್ರೇಡ್ ಮಾರ್ಕ್ ಉಳಿಸಿಕೊಂಡಿದೆ.KSRTC ಟ್ರೇಡ್ ಮಾರ್ಕ್ ಬಳಕೆ ಬಗ್ಗೆ ಸಮರ ನಡೆದಿದ್ದು, ಕರ್ನಾಟಕ ಹಾಗೂ ಕೇರಳ ಸಾರಿಗೆ ಸಂಸ್ಥೆಗಳ ನಡುವೆ ಫೈಟ್ ನಡೆದಿತ್ತು. ಕೇರಳ KSRTC ಹೆಸರು ನಮ್ಮದೆಂದು ಕೋರ್ಟ್ ಮೊರೆ ಹೋಗಿತ್ತು. ಮದ್ರಾಸ್ ಹೈಕೋರ್ಟ್‌ನ ಬೌದ್ಧಿಕ ಆಸ್ತಿ ಮೇಲ್ಮನವಿ ಮಂಡಳಿ ಆದೇಶ ನೀಡಿದೆ. ಎರಡೂ ರಾಜ್ಯಗಳ ಸಾರಿಗೆ ಸಂಸ್ಥೆ ಹೆಸರು ಇಂಗ್ಲಿಷ್ನಲ್ಲಿ ಒಂದೇ ಇತ್ತು. 2021ರಲ್ಲಿ ಟ್ರೆಂಡ್ ಮಾರ್ಕ್ ರಿಜಿಸ್ಟ್ರಾರ್ ಕರ್ನಾಟಕ KSRTC ಬಳಸುವಂತಿಲ್ಲ ಎಂದಿತ್ತು. ಕರ್ನಾಟಕ ಈ ಆದೇಶ ಪ್ರಶ್ನೆ ಮಾಡಿ ಕೋರ್ಟ್ ಮೊರೆ ಹೋಗಿತ್ತು.
ಕಳೆದ 27 ವರ್ಷಗಳಿಂದಲೂ KSRTC ಟ್ರೇಡ್ ಮಾರ್ಕ್ ಸಮರ ನಡೆದಿತ್ತು. ಕೇರಳ-ಕರ್ನಾಟಕ ಸಾರಿಗೆ ಸಂಸ್ಥೆಗಳ ನಡುವೆ ಫೈಟ್ ನಡೆದಿತ್ತು. ಕೇಂದ್ರದ ಟ್ರೇಡ್ ಮಾರ್ಕ್ ರಿಜಿಸ್ಟ್ರಿ 2013ರಲ್ಲಿ ಪ್ರಮಾಣ ಪತ್ರ ಪರಿಶೀಲಿಸಿತ್ತು.1973ರಿಂದ ಟ್ರೇಡ್ ಮಾರ್ಕ್ ಬಳಕೆ ಮಾಡ್ತಿರೋದನ್ನು ಪರಿಶೀಲಿಸಿತ್ತು. KSRTC ಲೋಗೋ ಮತ್ತು ‘ಗಂಡಭೇರುಂಡ ಗುರುತು’ ಬಳಕೆಗೆ ಕಾಪಿ ರೈಟ್ ನಡೆದಿದೆ. ಕೇರಳ ಚೆನ್ನೈನ ಬೌದ್ಧಿಕ ಆಸ್ತಿ ಮೇಲ್ಮನವಿ ಮಂಡಳಿಗೆ ಹೋಗಿತ್ತು. ಕರ್ನಾಟಕ 42 ವರ್ಷದಿಂದ KSRTC ಬಳಸ್ತಿರೋದು ಕೇರಳಕ್ಕೆ ಗೊತ್ತು. KSRTC ಪಡೆದಿರುವ ಟ್ರೇಡ್ ಮಾರ್ಕ್ ನೋಂದಣಿ ಅಮಾನ್ಯವಲ್ಲ, ಈ ಬಗ್ಗೆ ಅರ್ಜಿ ಸಲ್ಲಿಸಲು ಕೇರಳ ಅರ್ಹರಾಗಿರುವುದಿಲ್ಲ ಎಂದು KSRTC ವಾದವಾಗಿದೆ. ಕೇರಳ KSRTC ಕೂಡ 2019ರಲ್ಲಿ KSRTC ಸಂಕ್ಷಿಪ್ತ ಹೆಸರು ಬಳಕೆ ನೋಂದಣಿ ಪಡೆದಿತ್ತು. ಕೇಂದ್ರ ಸರ್ಕಾರವು ಆನಂತರ ಐಪಿಎಬಿಯನ್ನು ರದ್ದುಗೊಳಿಸಿತ್ತು. ಐಪಿಎಬಿ ಮುಂದಿದ್ದ ಪ್ರಕರಣ ಮದ್ರಾಸ್ ಹೈಕೋರ್ಟ್‌ಗೆ ವರ್ಗಾಯಿಸಲಾಗಿತ್ತು.
ನಾಯಿ ಕಚ್ಚಿದನ್ನು ಪ್ರಶ್ನಿಸಿದಾತನ ಮೇಲೆ ನಾಯಿ ಮಾಲಕನಿಂದ ಚೂರಿಯಿರಿತ
ಪಾದಾಚಾರಿಯೊಬ್ಬರಿಗೆ ದಾರಿ ಮಧ್ಯೆ ನಾಯಿಯೊಂದು ಕಚ್ಚಿದ್ದು, ಇದನ್ನು ಪ್ರಶ್ನಿಸಿದ್ದಕ್ಕೆ ನಾಯಿಯ ಯಜಮಾನ ಕತ್ತಿಯಿಂದ ಕಡಿದು ಹಲ್ಲೆ ಮಾಡಿದ ಘಟನೆಯೊಂದು ಡಿ.13 ರಂದು ನಡೆದಿದೆ. ಈ ಘಟನೆ ಬಂಟ್ವಾಳ, ಕಾವಳ ಮುಡೂರು ಗ್ರಾಮದಲ್ಲಿ ನಡೆದಿದೆ.ಸಂತೋಷ್ ದೇವಾಡಿಗ ಹಲ್ಲೆಗೊಳಗಾದ ವ್ಯಕ್ತಿ. ಶ್ರೀಧರ ಶೆಟ್ಟಿ ಹಲ್ಲೆ ಆರೋಪಿ.
ಡಿ.13 ರಂದು ಕಾವಳಕಟ್ಟೆಯಿಂದ ನೆಲ್ಲಿಗುಡ್ಡೆ ಕಡೆಗೆ ಹೋಗುವ ಸಾರ್ವಜನಿಕ ರಸ್ತೆಯಲ್ಲಿ ಸಂತೋಷ್ ದೇವಾಡಿಗ ಅವರು ನಡೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ, ಬಾರದಬೈಲು ಎಂಬಲ್ಲಿಗೆ ತಲುಪಿದಾಗ ಪಕ್ಕದ ಮನೆಯ ನಾಯಿಯೊಂದು ಬಲಗಾಲಿಗೆ ಕಚ್ಚಿದೆ. ಈ ಸಮಯದಲ್ಲಿ ಆರೋಪಿ ಶ್ರೀಧರ ಶೆಟ್ಟಿಯವರು ಮನೆಯಂಗಳದಲ್ಲಿ ನಿಂತಿದ್ದು, ಯಾಕೆ ಕಚ್ಚುವ ನಾಯಿಯನ್ನು ರಸ್ತೆಗೆ ಬಿಡುತ್ತೀರಿ ಎಂದು ಪ್ರಶ್ನೆ ಮಾಡಿದಾಗ, ಶ್ರೀಧರ್ ಅವರು ಅವಾಚ್ಯ ಶಬ್ದಗಳಿಂದ ಬೈದು ಕಡಿದು ಗಾಯಗೊಳಿಸಿದ್ದಾಗಿ ಪೂಂಜಾಲಕಟ್ಟೆ ಠಾಣೆಗೆ ನೀಡಿದ ದೂರಿನಲ್ಲಿ ಸಂತೋಷ್ ಅವರು ಆರೋಪ ಮಾಡಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ನಕಲಿ ವೈದ್ಯರ ಕ್ಲಿನಿಕ್ ಮೇಲೆ ಆರೋಗ್ಯ ಇಲಾಖೆಯ ಅಧಿಕಾರಿಗಳ ದಾಳಿ
ಉಡುಪಿ, ಡಿಸೆಂಬರ್ 16 :
ಜಿಲ್ಲೆಯಲ್ಲಿ ನಕಲಿ ವೈದ್ಯರ ಹಾವಳಿಯನ್ನು ತಡೆಯುವ ಉದ್ದೇಶದೊಂದಿಗೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ವಿವಿಧೆಡೆ ಧಿಡೀರ್ ದಾಳಿ ಹಾಗೂ ತಪಾಸಣೆ ಕೈಗೊಂಡು ಕ್ಲಿನಿಕ್ ಹಾಗೂ ಲ್ಯಾಬ್‌ಗಳ ನ್ಯೂನ್ಯತೆ ಕಂಡು ಬಂದ ಹಿನ್ನೆಲೆ, ನಕಲಿ ವೈದ್ಯ ತಡೆ ಹಾಗೂ ಕೆ.ಪಿ.ಎಂ.ಇ ಕಾಯ್ದೆಯಡಿ ಪ್ರಕರಣ ದಾಖಲಿಸಿ, ಲ್ಯಾಬ್ ಹಾಗೂ ಕ್ಲಿನಿಕ್‌ಗಳನ್ನು ಸೀಜ್ ಮಾಡಲಾಗಿದೆ.
ಉಡುಪಿ ತಾಲೂಕು ಪ್ರಾಧಿಕಾರ ಹಾಗೂ ಆರೋಗ್ಯ ಅಧಿಕಾರಿಗಳ ನೇತೃತ್ವದ ತಂಡವು ಆದಿ ಉಡುಪಿಯ ಧನ್ವಂತರಿ ಕ್ಲಿನಿಕ್‌ನಲ್ಲಿ ಡಾ. ಎ.ಆರ್ ಆಚಾರ್ಯ ರವರು ಆಯುರ್ವೇದ ಕ್ಲಿನಿಕ್‌ನ ನೋಂದಣಿ ಹೊಂದಿ ಅಲೋಪತಿಕ್ ಪದ್ಧತಿಯ ಚಿಕಿತ್ಸೆ ನೀಡುತ್ತಿದ್ದ ಹಿನ್ನೆಲೆ ಪ್ರಕರಣ ದಾಖಲಾಗಿದೆ. ಕುಂದಾಪುರ ತಾಲೂಕು ಪ್ರಾಧಿಕಾರ ಮತ್ತು ಆರೋಗ್ಯ ಅಧಿಕಾರಿಗಳ ತಂಡವು ನಾವುಂದದ ನಂಬಿಯಾರ್ ಕ್ಲಿನಿಕ್ ನಲ್ಲಿ ಡಾ. ಪ್ರಜೀತ್ ಎಸ್ ನಂಬಿಯಾರ್ ಅವರು, ಆಯುರ್ವೇದಿಕ್ ಪದ್ಧತಿಯಲ್ಲಿ ನೋಂದಾವಣೆ ಹೊಂದಿ ಅಲೋಪತಿಕ್ ಪದ್ಧತಿಯಲ್ಲಿ ಚಿಕಿತ್ಸೆ ನೀಡುತ್ತಿರುವುದು ಕಂಡುಬಂದಿರುವ ಹಿನ್ನೆಲೆ, ಪ್ರಕರಣ ದಾಖಲಿಸಲಾಗಿದೆ.
ಕುಂದಾಪುರ ತಾಲೂಕು ಪ್ರಾಧಿಕಾರ ಹಾಗೂ ಆರೋಗ್ಯ ಅಧಿಕಾರಿಗಳ ತಂಡವು ಉಪ್ಪುಂದದ ಸುಷ್ಮಾ ಕ್ಲಿನಿಕಲ್ ಲ್ಯಾಬ್ ಅನ್ನು ಲತಾ ಸುನೀಲ್ ಕೆ ಅವರು ಪರವಾನಿಗೆ ಇಲ್ಲದೇ ನಡೆಸುತ್ತಿರುವುದು ಕಂಡು ಬಂದ ಹಿನ್ನೆಲೆ, ಲ್ಯಾಬ್ ಅನ್ನು ಸೀಝ್ ಮಾಡಿ, ಪ್ರಕರಣ ದಾಖಲಿಸಲಾಗಿದೆ. ಕುಂದಾಪುರ ತಾಲೂಕು ಪ್ರಾಧಿಕೃತ ಹಾಗೂ ಆರೋಗ್ಯ ಅಧಿಕಾರಿಗಳ ತಂಡವು ಕುಂದಾಪುರದ ಬಯೋಲಿನ್ ಲ್ಯಾಬ್ ನಲ್ಲಿ ರಾಜ್ಯದ ನೋಂದಾವಣೆ ಪ್ರಮಾಣ ಪತ್ರವನ್ನು ಹೊಂದಿರದವರು ಲ್ಯಾಬ್ ಟೆಕ್ನಿಷಿಯನ್ ಆಗಿ ಕಾರ್ಯನಿರ್ವಹಣೆ ಮಾಡುತ್ತಿರುವುದು ಕಂಡುಬಂದಿರುವ ಹಿನ್ನೆಲೆ, ಎಫ್.ಐ.ಆರ್ ದಾಖಲಿಸಲಾಗಿದೆ. ಸಾರ್ವಜನಿಕರು ಜಾಗೃತೆ ವಹಿಸಿ ಕೆ.ಪಿ.ಎಂ.ಇ ಕಾಯ್ದೆ ಅಡಿಯಲ್ಲಿ ನೊಂದಾವಣೆಯಾಗಿರದ ಅಥವಾ ನಕಲಿ ವೈದ್ಯರುಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳಬಾರದು. ನಕಲಿ ವೈದ್ಯರ ಬಗ್ಗೆ ಮಾಹಿತಿ ಇದ್ದಲ್ಲಿ ಕುಂದಾಪುರ ಮೊ.ನಂ. 8277505911, ಕಾರ್ಕಳ ಮೊ.ನಂ. 8277505892 ಅಥವಾ ಉಡುಪಿಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ ದೂ.ಸಂಖ್ಯೆ: 0820-2525566, 2536650 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
Friday, 15 December 2023
ನಾಯಿ ಕಚ್ಚಿದನ್ನು ಪ್ರಶ್ನಿಸಿದಾತನ ಮೇಲೆ ನಾಯಿ ಮಾಲಕನಿಂದ ಚೂರಿಯಿರಿತ
ಪಾದಾಚಾರಿಯೊಬ್ಬರಿಗೆ ದಾರಿ ಮಧ್ಯೆ ನಾಯಿಯೊಂದು ಕಚ್ಚಿದ್ದು, ಇದನ್ನು ಪ್ರಶ್ನಿಸಿದ್ದಕ್ಕೆ ನಾಯಿಯ ಯಜಮಾನ ಕತ್ತಿಯಿಂದ ಕಡಿದು ಹಲ್ಲೆ ಮಾಡಿದ ಘಟನೆಯೊಂದು ಡಿ.13 ರಂದು ನಡೆದಿದೆ. ಈ ಘಟನೆ ಬಂಟ್ವಾಳ, ಕಾವಳ ಮುಡೂರು ಗ್ರಾಮದಲ್ಲಿ ನಡೆದಿದೆ.ಸಂತೋಷ್ ದೇವಾಡಿಗ ಹಲ್ಲೆಗೊಳಗಾದ ವ್ಯಕ್ತಿ. ಶ್ರೀಧರ ಶೆಟ್ಟಿ ಹಲ್ಲೆ ಆರೋಪಿ.
ಡಿ.13 ರಂದು ಕಾವಳಕಟ್ಟೆಯಿಂದ ನೆಲ್ಲಿಗುಡ್ಡೆ ಕಡೆಗೆ ಹೋಗುವ ಸಾರ್ವಜನಿಕ ರಸ್ತೆಯಲ್ಲಿ ಸಂತೋಷ್ ದೇವಾಡಿಗ ಅವರು ನಡೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ, ಬಾರದಬೈಲು ಎಂಬಲ್ಲಿಗೆ ತಲುಪಿದಾಗ ಪಕ್ಕದ ಮನೆಯ ನಾಯಿಯೊಂದು ಬಲಗಾಲಿಗೆ ಕಚ್ಚಿದೆ. ಈ ಸಮಯದಲ್ಲಿ ಆರೋಪಿ ಶ್ರೀಧರ ಶೆಟ್ಟಿಯವರು ಮನೆಯಂಗಳದಲ್ಲಿ ನಿಂತಿದ್ದು, ಯಾಕೆ ಕಚ್ಚುವ ನಾಯಿಯನ್ನು ರಸ್ತೆಗೆ ಬಿಡುತ್ತೀರಿ ಎಂದು ಪ್ರಶ್ನೆ ಮಾಡಿದಾಗ, ಶ್ರೀಧರ್ ಅವರು ಅವಾಚ್ಯ ಶಬ್ದಗಳಿಂದ ಬೈದು ಕಡಿದು ಗಾಯಗೊಳಿಸಿದ್ದಾಗಿ ಪೂಂಜಾಲಕಟ್ಟೆ ಠಾಣೆಗೆ ನೀಡಿದ ದೂರಿನಲ್ಲಿ ಸಂತೋಷ್ ಅವರು ಆರೋಪ ಮಾಡಿದ್ದಾರೆ.
Wednesday, 13 December 2023
ಲೋಕಸಭೆಯಲ್ಲಿ ಭಾರೀ ಭದ್ರತಾ ಲೋಪ, ಎದ್ನೋ-ಬಿದ್ನೋ ಅಂತ ಓಡಿದ ಸಂಸದರು!
ಲೋಕಸಭೆಯಲ್ಲಿ (Loksabha) ಭಾರೀ ಭದ್ರತಾ ಲೋಪವಾಗಿದೆ. ಹಿಂದೆಂದೂ ನಡೆದಿರದಂಥ ಒಂದು ಘಟನೆ ನಡೆದಿದೆ. ಲೋಕಸಭೆಯಲ್ಲಿದ್ದ ಸಚಿವರು ಜೀವ ಉಳಿಸಿಕೊಳ್ಳಲು ದಿಕ್ಕಾಪಾಲಾಗಿ ಓಡಿದ್ದಾರೆ.
ನೀಲಿ ಬಣ್ಣದ ಜಾಕೆಟ್ ಧರಿಸಿದ ಯುವಕನೊಬ್ಬ ಸಂದರ್ಶಕರ ಗ್ಯಾಲರಿಯಿಂದ ಜಿಗಿದು ಸದನದ ಸುತ್ತಲೂ ಓಡಲು ಪ್ರಾರಂಭಿಸಿದ್ದಾನೆ. ಬಳಿಕ ಆತನ ಜೊತೆ ಮತ್ತೊಬ್ಬ ಸೇರಿಕೊಂಡಿದ್ದು ಇಬ್ಬರೂ ಟಿಯರ್ ಗ್ಯಾಸ್ (Tear Gas) ಎಸೆದು ಆತಂಕ ಸೃಷ್ಟಿಸಿದ್ದಾರೆ. ಈ ಘಟನೆ ನಡೆಯುತ್ತಿದ್ದಂತೆ ಅಲ್ಲಿ ನೆರೆದಿದ್ದ ಸಂಸದರು ದಿಕ್ಕಾಪಾಲಾಗಿ ಓಡಿ ಹೊರಬಂದಿದ್ದಾರೆ.
ಬಳಿಕ ಆತನ ಜೊತೆ ಮತ್ತೊಬ್ಬ ಸೇರಿಕೊಂಡಿದ್ದು ಇಬ್ಬರೂ ಟಿಯರ್ ಗ್ಯಾಸ್ (Tear Gas) ಎಸೆದು ಆತಂಕ ಸೃಷ್ಟಿಸಿದ್ದಾರೆ. ಈ ಘಟನೆ ನಡೆಯುತ್ತಿದ್ದಂತೆ ಅಲ್ಲಿ ನೆರೆದಿದ್ದ ಸಂಸದರು ದಿಕ್ಕಾಪಾಲಾಗಿ ಓಡಿ ಹೊರಬಂದಿದ್ದಾರೆ. 22 ವರ್ಷಗಳ ಹಿಂದೆ ಇದೇ ರೀತಿಯ ಘಟನೆ ನಡೆದಿತ್ತಂತೆ.
ವೀಕ್ಷಕರ ಗ್ಯಾಲರಿಯಲ್ಲಿ ಕುಳಿತಿದ್ದ ಸಾಗರ್ ಎಂಬ ವ್ಯಕ್ತಿಯೊಬ್ಬ ಇದ್ದಕ್ಕಿದ್ದ ಹಾಗೇ ಸದನದ ಬಾವಿಗೆ ಹಾರಿದ್ದಾನೆ. ಇವರನ್ನು ಕಂಡ ಸಂಸದರು ಹೆದರಿ ಹೊರಗೆ ಓಡಿ ಬಂದಿದ್ದಾರೆ.
Yuva Nidhi Scheme: ಕಾಂಗ್ರೆಸ್ ಸರ್ಕಾರದ ಐದನೇ ಗ್ಯಾರಂಟಿ ಜಾರಿಗೆ ಮುಹೂರ್ತ ಫಿಕ್ಸ್; 5 ಲಕ್ಷ ಪದವೀಧರರ ಖಾತೆಗೆ ಹಣ
ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆ ಜಾರಿಗೆ ದಿನಾಂಕ ನಿಗಧಿಯಾಗಿದೆ. ಕಾಂಗ್ರೆಸ್ ಪಕ್ಷ ಚುನಾವಣೆಗೂ ನೀಡಿದ್ದ ಐದು ಗ್ಯಾರಂಟಿಗಳಲ್ಲಿ ಯುವನಿಧಿ ಕೂಡ ಒಂದಾಗಿದೆ. ಯುವನಿಧಿ ಗ್ಯಾರಂಟಿಯು ಪದವೀಧರ ನಿರುದ್ಯೋಗಿಗಳಿಗೆ ಆರ್ಥಿಕ ಸಹಾಯ ಮಾಡುವ ಯೋಜನೆಯಾಗಿದೆ.ಹೌದು, ಯುವನಿಧಿ ಯೋಜನೆ ಜಾರಿಗೆ ಕೊನಗೂ ದಿನಾಂಕ ನಿಗಧಿ ಮಾಡಲಾಗಿದೆ. ಸರ್ಕಾರ ನೀಡಿರುವ ಮಾಹಿತಿಯಂತೆ ಇದೇ ಡಿಸೆಂಬರ್ 21ರಿಂದ ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಪ್ರಾರಂಭವಾಗಲಿದೆ. ಹಾಗಾದ್ರೆ ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸುವುದಕ್ಕೆ ಬೇಕಾದ ದಾಖಲೆಗಳೇನು? ಯಾರೆಲ್ಲಾ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.ಯುವನಿಧಿ ಯೋಜನೆಗೆ 2022-23ರಲ್ಲಿ ತೇರ್ಗಡೆಯಾದ ಪದವೀಧರ ಹಾಗೂ ಡಿಪ್ಲೊಮ ಉತ್ತೀರ್ಣರಾದ ನಿರುದ್ಯೋಗಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅಂದರೆ ತಾವು ಉತ್ತೀರ್ಣರಾದ ದಿನಾಂಕದಿಂದ 180 ದಿನ ಕಳೆದರೂ ಉದ್ಯೋಗ ಲಭಿಸದ ಪದವೀಧರ ನಿರುದ್ಯೋಗಿಗಳಿಗೆ ಮಾತ್ರ ಯುವ ನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಅಲ್ಲದೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ ದಿನಾಂಕದಿಂದ ತಾವು ಉದ್ಯೋಗ ಸಿಗುವವರೆಗೆ ಮಾತ್ರ ಈ ಯೋಜನೆಯ ಸೌಲಭ್ಯ ಪಡೆದುಕೊಳ್ಳಬಹುದು. ಇಲ್ಲವೇ ಎರಡು ವರ್ಷ ಗರಿಷ್ಠ ಅವಧಿಯ ವರೆಗೆ ಮಾತ್ರ ಸೌಲಭ್ಯ ಪಡೆದುಕೊಳ್ಳಬಹುದು
ಯುವನಿಧಿಗೆ ಯಾರು ಅರ್ಜಿ ಸಲ್ಲಿಸುವುದಕ್ಕೆ ಸಾಧ್ಯವಿಲ್ಲ:
* ಉನ್ನತ ಶಿಕ್ಷಣಕ್ಕೆ ಪ್ರವೇಶ ಪಡೆದವರಿಗೆ ಈ ಯೋಜನೆಯ ಲಾಭ ದೊರೆಯುವುದಿಲ್ಲ.
* ಅಪ್ರೆಂಟಿಸ್ ಹುದ್ದೆಯಲ್ಲಿರುವವರಿಗೆ ಇದರ ಲಾಭ ದೊರೆಯದು.
* ಸರ್ಕಾರಿ ಮತ್ತು ಖಾಸಗಿ ವಲಯ ಉದ್ಯೋಗ ಪಡೆದಿರುವವರು.
ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ?
ಯುವನಿಧಿ ಯೋಜನೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ. ಇದಕ್ಕಾಗಿ ನೀವು ಸೇವಾಸಿಂಧು ಪೋರ್ಟಲ್ https://sevasindhu.karnataka.gov.inಗೆ ಬೇಟಿ ನೀಡಬೇಕಾಗುತ್ತದೆ.
ಯುವನಿಧಿ ಹಣ ಬರುವುದು ಯಾವಾಗ?
ಇನ್ನು ಈ ಯೋಜನೆಯೆ ಮೊದಲ ಕಂತಿನ ಹಣ 2024 ರ ಜನವರಿ ತಿಂಗಳಿಂದಲೇ ಸಿಗಲಿದೆ ಎಂದು ಸರ್ಕಾರ ತಿಳಿಸಿದೆ. ಇದು 2022-23ರಲ್ಲಿ ತೇರ್ಗಡೆಯಾದ ಪದವೀಧರ ನಿರುದ್ಯೋಗಿಗಳಿಗೆ ಹಾಗೂ ಡಿಪ್ಲೊಮ ನಿರುದ್ಯೋಗಿಗಳಿಗೆ ಅನ್ವಯವಾಗಲಿದೆ. ಅಂದರೆ ಈ ಸಾಲಿನಲ್ಲಿ ಉತೀರ್ಣವಾಗಿರುವ ಪದವೀಧರ ಹಾಗೂ ಡಿಪ್ಲೊಮ ನಿರುದ್ಯೋಗಿಗಳಿಗೆ ನಿರುದ್ಯೋಗ ಭತ್ಯೆ ನೀಡುವ ಸಲುವಾಗಿಯೇ ಈ ಯುವ ನಿಧಿ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ
Tuesday, 12 December 2023
350 Million views in just 30 days 😲
ಹುಕ್ಕಾ ಬಾರ್ ನಿಯಂತ್ರಣಕ್ಕೆ ಶೀಘ್ರ ಕಾನೂನು: ಗೃಹ ಸಚಿವ ಜಿ ಪರಮೇಶ್ವರ.
ಹುಕ್ಕಾ ಬಾರ್ಗಳ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಜಯನಗರ ಶಾಸಕ ರಾಮಮೂರ್ತಿ ಗಮನ ಸೆಳೆದಿದ್ದಾರೆ. ನಂತರ ಪರಮೇಶ್ವರ ಅವರು ಉತ್ತರ ನೀಡಿ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಹುಕ್ಕಾ ಬಾರ್‌ಗಳನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ವಿಶೇಷ ಕಾನೂನು ರೂಪಿಸಲಿದೆ ಎಂದು ಹೇಳಿದ್ದಾರೆ.
ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಮಾತನಾಡಿದ ಅವರು, ಹುಕ್ಕಾ ಬಾರ್‌ಗಳು ಜನರ ಮೇಲೆ ಅದರಲ್ಲೂ ವಿಶೇಷವಾಗಿ ಯುವಕರ ಮೇಲೆ ಪರಿಣಾಮ ಬೀರುತ್ತಿವೆ. ಆದರೆ ಅವರ ಬಗ್ಗೆ ಏನೂ ಮಾಡಲು ಸಾಧ್ಯವಾಗಿಲ್ಲ ಎಂದು ಒಪ್ಪಿಕೊಂಡಿದ್ದಾರೆ.ಹುಕ್ಕಾ ಬಾರ್ ನಡೆಸಲು ಪರವಾನಗಿ ನೀಡುವ ಅಧಿಕಾರ ಬಿಬಿಎಂಪಿಗೆ ಇಲ್ಲ. ನಾವು ಮೊದಲೇ ಅವರನ್ನು ನಿಯಂತ್ರಿಸಲು ಪ್ರಯತ್ನಿಸಿದ್ದೇವೆ, ಆದರೆ ಸಾಧ್ಯವಾಗಲಿಲ್ಲ. ಆಹಾರ ಸುರಕ್ಷತಾ ಇಲಾಖೆಯು ಕಾರ್ಯನಿರ್ವಹಿಸಲು ಅನುಮತಿ ನೀಡಿದೆ. ನ್ಯಾಯಾಲಯದ ಆದೇಶವು ಹುಕ್ಕಾ ಬಾರ್‌ಗಳಿಗೆ ಯಾವುದೇ ಪರವಾನಗಿ ಅಗತ್ಯವಿಲ್ಲ ಎಂದು ಹೇಳುತ್ತದೆ. ನ್ಯಾಯಾಲಯಗಳ ಪ್ರಕಾರ, ನಿರ್ವಾಹಕರು ತಮ್ಮ ಆವರಣದಲ್ಲಿ ಹುಕ್ಕಾವನ್ನು ಬಳಸಬಹುದಾದ ಪ್ರತ್ಯೇಕ ಕೋಣೆಗಳನ್ನು ಹೊಂದಿರಬೇಕು’ ಎಂದು ಅವರು ಹೇಳಿದ್ದಾರೆ.
ಹುಕ್ಕಾ ಬಾರ್ಗಳ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಜಯನಗರ ಶಾಸಕ ರಾಮಮೂರ್ತಿ ಗಮನ ಸೆಳೆದಿದ್ದಾರೆ. ನಂತರ ಪರಮೇಶ್ವರ ಅವರು ಉತ್ತರ ನೀಡಿದ್ದಾರೆ.
ರಾಜಸ್ಥಾನದ ನೂತನ ಮುಖ್ಯಮಂತ್ರಿಯಾಗಿ ಭಜನ್‌ಲಾಲ್ ಶರ್ಮಾ ಆಯ್ಕೆ.
ಬಿಜೆಪಿ ಶಾಸಕಾಂಗ ಸಭೆಯಲ್ಲಿ ರಾಜಸ್ಥಾನದ ನೂತನ ಸಿಎಂ ಹೆಸರು ಘೋಷಣೆ ಮಾಡಲಾಗಿದೆ. ರಾಜ್ಯದ ವೀಕ್ಷಕ ರಾಜನಾಥ್ ಸಿಂಗ್ ಅವರು ಭಜನ್‌ಲಾಲ್ ಶರ್ಮಾ ಅವರನ್ನು ನೂತನ ಮುಖ್ಯಮಂತ್ರಿಯಾಗಿ ಘೋಷಿಸಿದ್ದಾರೆ.ಶರ್ಮಾ ಅವರು ಸಂಗನೇರ್ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಾರೆ. ಅವರು ನಾಲ್ಕು ಬಾರಿ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ.ಶರ್ಮಾ 2023 ರಲ್ಲಿ ಕಾಂಗ್ರೆಸ್‌ನ ಪುಷ್ಪೇಂದ್ರ ಭಾರದ್ವಾಜ್ ಅವರನ್ನು 48,081 ಮತಗಳ ಅಂತರದಿಂದ ಸೋಲಿಸಿ ಸಂಗನೇರ್ ಸ್ಥಾನವನ್ನು ಗೆದ್ದಿದ್ದರು. ನೂತನ ಡಿಸಿಎಂ ಪ್ರೇಮ್ಚಂದ್ ಭೈರ್ವಾ ಮತ್ತು ದಿಯಾ ಕುಮಾರಿ ಅವರನ್ನು ಆಯ್ಕೆ ಮಾಡಲಾಗಿದೆ.ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಅಫಿಡವಿಟ್ ಪ್ರಕಾರ, 56 ವರ್ಷದ ಶರ್ಮಾ ಸ್ನಾತಕೋತ್ತರ ಪದವೀಧರರಾಗಿದ್ದಾರೆ. ಅವರ ಒಟ್ಟು ಘೋಷಿತ ಆಸ್ತಿ 1.5 ಕೋಟಿ ರೂ.ಗಳಾಗಿದ್ದು, ಇದರಲ್ಲಿ 43.6 ಲಕ್ಷ ಚರ ಆಸ್ತಿ ಮತ್ತು 1 ಕೋಟಿ ಸ್ಥಿರ ಆಸ್ತಿಗಳು ಸೇರಿವೆ. ಒಟ್ಟು ಘೋಷಿತ ಆದಾಯ 11.1 ಲಕ್ಷ ರೂ. ಇದರಲ್ಲಿ 6.9 ಲಕ್ಷ ಸ್ವಯಂ ಆದಾಯವಿದೆ.
Watch Full video here
Monday, 11 December 2023
ಸುದ್ದಿಗಳುಶಬರಿಮಲೆ: ದರ್ಶನ ಅವಧಿ 1 ತಾಸು ವಿಸ್ತರಣೆ
ಶ್ರೀ ಕ್ಷೇತ್ರ ಶಬರಿಮಲೆಗೆ ಆಗಮಿಸುತ್ತಿರುವ ಭಕ್ತರ ಸಂಖ್ಯೆ ಹೆಚ್ಚುತ್ತಿರುವುದರಿಂದ ದರ್ಶನದ ಅವಧಿಯನ್ನು ಒಂದು ತಾಸು ಹೆಚ್ಚಿಸುವ ತೀರ್ಮಾನವನ್ನು ಟ್ರಾವಂಕೂರು ದೇವಸ್ವಂ ಬೋರ್ಡ್ ರವಿವಾರ ತೆಗೆದುಕೊಂಡಿದೆ. ಇದುವರೆಗೆ ಅಪರಾಹ್ನ 4ರಿಂದ ರಾತ್ರಿ 11 ಗಂಟೆಯ ವರೆಗೆ ದರ್ಶನಕ್ಕೆ ಅವಕಾಶ ಇತ್ತು, ಇದನ್ನು ಅಪರಾಹ್ನ 3ರಿಂದಲೇ ಆರಂಭಿಸಲು ತೀರ್ಮಾನಿಸಲಾಗಿದೆ ಎಂದು ಪಟ್ಟನಂತಿಟ್ಟ ಜಿಲ್ಲಾಡಳಿತ ತಿಳಿಸಿದೆ.ದರ್ಶನಕ್ಕಾಗಿ ಸರತಿಯಲ್ಲಿ ನಿಂತಿರುವ ಭಕ್ತರ ಅನುಕೂಲಕ್ಕಾಗಿ ಕುಡಿಯುವ ನೀರು ಮತ್ತು ಬಿಸ್ಕತ್ತುಗಳನ್ನು ವಿತರಿಸಲಾಗುತ್ತಿದೆ ಎಂದೂ ಅದು ಹೇಳಿದೆ.
Watch Vidoe news Here
ಕಾರ್ಕಳದಲ್ಲಿ ಬಸ್- ಜೀಪು ಢಿಕ್ಕಿ- ಓರ್ವ ಮೃತ್ಯು, ಹಲವರಿಗೆ ಗಾಯ..!
ಬಸ್ಸು ಮತ್ತು ಬೊಲೆರೋ ಜೀಪ್ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟು, ಹಲವಾರು ಮಂದಿ ಗಾಯಗೊಂಡ ಘಟನೆ ಪಡುಬಿದ್ರಿ- ಕಾರ್ಕಳ ರಸ್ತೆಯ ನಿಟ್ಟೆ ಸಮೀಪದ ಮಂಜರಪಲ್ಕೆ ಎಂಬಲ್ಲಿ ನಿನ್ನೆ ನಡೆದಿದೆ.ಗಂಭೀರ ಗಾಯಗೊಂಡ ಇಬ್ಬರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಮಂಜರ್ಪಲ್ಕೆ ಎಂಬಲ್ಲಿ ನಂದಳಿಕೆ ಕಡೆಯಿಂದ ಬರುತ್ತಿದ್ದ ಬೋಲೆರೊ ಕಾರು ಕಾರ್ಕಳ ಕಡೆಯಿಂದ ಬೆಳ್ಮಣ್ ಮಾರ್ಗವಾಗಿ ಮುಂಬಯಿಗೆ ಹೋಗುತ್ತಿದ್ದ ಖಾಸಗಿ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ಸಂಭವಿಸಿದೆ. ಚಿಕ್ಕಮಗಳೂರು ಜಿಲ್ಲೆಯ ಜಯಪುರ ನಿವಾಸಿ ಶಿವಪ್ಪ (48) ಸ್ಥಳದಲ್ಲೇ ಮೃತಪಟ್ಟರೆ, ಮಂಜು (45) ಮತ್ತು ಸುಜಯ (28) ಅವರ ಸ್ಥಿತಿ ಗಂಭೀರ ವಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರ್ಕಳ ತಾಲೂಕಿನ ನಂದಳಿಕೆಯ ತಮ್ಮ ಕುಟುಂಬದ ಮನೆಗೆ ದೇವರ ಕಾರ್ಯಕ್ಕಾಗಿ ಚಿಕ್ಕಮಗಳೂರು ಜಿಲ್ಲೆಯ ಜಯಪುರದಿಂದ ಬೆಳಗ್ಗೆ ಬಂದಿದ್ದ ಕುಟುಂಬದ ಸದಸ್ಯರು ಮನೆಯಲ್ಲಿ ಪೂಜೆ ಮುಗಿಸಿ ಮಧ್ಯಾಹ್ನದ ಭೋಜನ ಮುಗಿಸಿ ನಂದಳಿಕೆಯಿಂದ ಹಿಂದಿರುವ ಸಂಧರ್ಭದಲ್ಲಿ ಈ ಅಪಘಾತ ನಡೆದಿದೆ.ಅಪಘಾತದಲ್ಲಿ ಮೃತರಾದ ಕುಟುಂಬ ಗುರಿಕಾರ ಶಿವಪ್ಪನವರೇ ಮುಂದೆ ನಿಂತು ದೈವದ ಕೆಲಸದ ವಿಧಿವಿಧಾನಗಳನ್ನು ನಡೆಸಿಕೊಟ್ಟಿದ್ದರು. ಬಸ್ಸಿನಲ್ಲಿದ್ದ 12 ಮಂದಿ ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕಾರ್ಕಳ ರೋಟರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಘಟನಾ ಸ್ಥಳಕ್ಕೆ ಅಗಮಿಸಿದ 108 ಆಂಬುಲೆನ್ಸ್ ಸಿಬಂದಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ನೆರವಾದರು. ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಢಿಕ್ಕಿಯ ರಭಸಕ್ಕೆ ಜೀಪಿನ ಮುಂಭಾಗ ಸಂಪೂರ್ಣ ಪುಡಿಯಾಗಿದ್ದು, ಎರಡೂ ಟಯರುಗಳು ಕಳಚಲ್ಪಟ್ಟಿವೆ. ಬಸ್ಸು ಮತ್ತು ಜೀಪ್ ಸಹಿತ ಎರಡೂ ವಾಹನಗಳು ರಸ್ತೆಯ ಬದಿಗೆ ಸರಿಯಲ್ಪಟ್ಟಿವೆ.
Sunday, 10 December 2023
ಸುದ್ದಿಗಳುಇನ್ಸ್ಟಾಗ್ರಾಮ್‌ನಲ್ಲಿ ‘RIP’ ಫೋಟೋ ಪೋಸ್ಟ್ ಮಾಡಿ ಆತ್ಮಹತ್ಯೆಗೆ ಶರಣಾದ ಯುವಕ.
ಸಾವಿನ ಮೊದಲೇ ತನ್ನ ಫೋಟೋಗೆ ‘RIP’ಎಂದು ಬರೆದು ಯುವಕನೊಬ್ಬ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೇರಳದ ಎರ್ನಾಕುಲಂ ಜಿಲ್ಲೆಯ ಆಲುವಾದಲ್ಲಿ ನಡೆದಿದೆ.
ಅಜ್ಮಲ್ ಶೆರೀಫ್ ಅವರಿಗೆ ಇನ್ಸ್ಟಾಗ್ರಾಮ್ ನಲ್ಲಿ 14 ಸಾವಿರಕ್ಕೂ ಹೆಚ್ಚಿನ ಫಾಲೋವರ್ಸ್ ಗಳಿದ್ದಾರೆ. ಫೋಟೋಗ್ರಾಫಿ, ಕಾರು ಹಾಗೂ ಬೈಕ್ ಸಂಬಂಧಿತ ಫೋಸ್ಟ್ ಗಳನ್ನು ಈ ಪೇಜ್ ನಲ್ಲಿ ಅಜ್ಮಲ್ ಹಾಕುತ್ತಿದ್ದರು.
ಶುಕ್ರವಾರ ಡಿ.8 ರಂದು ಸಂಜೆ ಅಜ್ಮಲ್ ತನ್ನ ಇನ್ಸ್ಟಾಗ್ರಾಮ್ ಪೇಜ್ ನಲ್ಲಿ ಫೋಟೋ ಹಾಕಿ ಅದರ ಕೆಳಗೆ ʼRIP’ಎಂದು ಬರೆದು ʼ1995-2023ʼ ಅಜ್ಮಲ್ ಶೆರೀಫ್ ನಿಧನರಾಗಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಬರೆದುಕೊಂಡಿದ್ದಾರೆ
ಬೆಂಗಳೂರು – ಮಂಗಳೂರು ಬಸ್ಸು ತಡೆದು ಮಾರಕಾಸ್ತ್ರದಿಂದ ಹಲ್ಲೆ- ಪುಡಿ ರೌಡಿಯ ಕಾಲಿಗೆ ಗುಂಡೇಟು, ಅರೆಸ್ಟ್
ಹಾಸನ: ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ತಡೆದು ಲಾಂಗ್‌ನಿಂದ ಹಲ್ಲೆ ಮಾಡಿ ಅಟ್ಟಹಾಸ ಮೆರೆದಿದ್ದ ಪುಡಿರೌಡಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘ...
-
ಕೇರಳಕ್ಕೆ ಭೇಟಿ ಕೊಟ್ಟ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಜನವರಿ 22ರಂದು ಅಯೋಧ್ಯೆಯಲ್ಲಿ ಅದ್ದೂರಿಯಾಗಿ ನಡೆಯಲಿರುವ ರಾಮಮಂದಿರದ ಶಂಕುಸ್ಥಾಪನೆ ಸಮಾರಂಭವನ್ನು ರಾಜ್ಯದ...
-
ಬೆಂಗಳೂರಿನ ವೈಯಾಲಿಕಾವಲ್ನಲ್ಲಿ ಕೊಲೆಯಾದ ಮಹಾಲಕ್ಷ್ಮೀ ಕಿರುಕುಳಕ್ಕೆ ಪತಿ ಹೇಮಂತ್ ಬೇಸತ್ತಿದ್ದ. ಪದೇಪದೆ ಗಂಡನಿಗೆ ಕಿರುಕುಳ ನೀಡಿ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ...
-
ಪುತ್ತೂರು ಸೆಪ್ಟೆಂಬರ್ 24: ಅಂಬ್ಯುಲೆನ್ಸ್ ಗೆ ಪಿಕಪ್ ವೊಂದು ಡಿಕ್ಕಿ ಹೊಡೆದ ಘಟನೆ ಘಟನೆ ಪುತ್ತೂರು ತಾಲೂಕಿನ ಮುರ ಎಂಬಲ್ಲಿ ಸೋಮವಾರ ತಡರಾತ್ರಿ ನಡೆದಿರುವ ಬಗ್ಗೆ ವರದ...














.jpg)


