Sunday, 29 September 2024

ಬಿಗ್ ಬಾಸ್ ಮನೆಗೆ ಕರಾವಳಿಯ ಹಿಂದೂ ಫೈರ್ ಬ್ರ್ಯಾಂಡ್ ಚೈತ್ರಾ ಕುಂದಾಪುರ.

ಬೆಂಗಳೂರು ಸೆಪ್ಟೆಂಬರ್ 29: ಕರಾವಳಿಯ ಹಿಂದೂ ಫೈರ್ ಬ್ರ್ಯಾಂಡ್ ಖ್ಯಾತಿಯ ಪ್ರಖರ ಭಾಷಣಗಾರ್ತಿ ಚೈತ್ರಾ ಕುಂದಾಪುರ ಈ ಬಾರಿ ಬಿಗ್ ಬಾಸ್ ಸೀಸನ್ 11 ರ ಮೂರನೆ ಸ್ಪರ್ಧಿಯಾಗಿ ಬಿಗ್ ಬಾಸ್ ಮನೆಗೆ ತೆರಳಿದ್ದಾರೆ.




ಚೈತ್ರಾ ಕುಂದಾಪುರ ಅವರು ಉಡುಪಿ ಜಿಲ್ಲೆ ಕುಂದಾಪುರದವರು.. ಪ್ರಖರ ಭಾಷಣಕಾರರಾಗಿ ಗಮನ ಸೆಳೆದವರು.ಕುಂದಾಪುರದಲ್ಲಿ ಪಿಯುಸಿವರೆಗೆ ವ್ಯಾಸಂಗ ಮಾಡಿದ ಚೈತ್ರಾ, ಕೊಣಾಜೆಯಲ್ಲಿ ಪದವಿ ಪೂರ್ಣಗೊಳಿಸಿದರು. ಮಂಗಳೂರು ವಿಶ್ವ ವಿದ್ಯಾಲಯದ ಪದವೀಧರೆಯಾದ ಚೈತ್ರಾ ಕುಂದಾಪುರ, ಕೆಲ ಕಾಲ ಬೆಂಗಳೂರಿನಲ್ಲಿ ಖಾಸಗಿ ವಾಹಿನಿಯಲ್ಲಿ ಕೆಲಸ ಮಾಡಿದ್ದರು.​ ಉಡುಪಿಯ ಸ್ಪಂದನ ಟಿವಿಯ ನಿರೂಪಕಿಯಾಗಿದ್ದರು ಕಾಲೇಜು ದಿನಗಳಿಂದಲೇ ಎಬಿವಿಪಿ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದರು. ಪತ್ರಕರ್ತೆಯಾಗಿ, ನಿರೂಪಕಿಯಾಗಿ ಭಾಷಣಕಾರರಾಗಿ ಗಮನ ಸೆಳೆದಿರೋ ಇವರು ಪ್ರೇಮ ಪಾಶ ಅನ್ನೋ ಚೊಚ್ಚಲ ಕೃತಿ ಬರೆದಿದ್ದಾರೆ.




ಉಡುಪಿ ಜಿಲ್ಲೆ ಬೈಂದೂರಿನ ಉದ್ಯಮಿ ಹಾಗೂ ಸಮಾಜ ಸೇವಕ ಗೋವಿಂದ ಬಾಬು ಪೂಜಾರಿ ಅವರಿಗೆ ಚೈತ್ರಾ ಕುಂದಾಪುರ ಮೋಸ ಮಾಡಿದ್ದಾರಂತೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸ್ತೇನೆ ಅಂತಾ ಚೈತ್ರಾ ಕುಂದಾಪುರ ನಂಬಿಸಿದ್ದರಂತೆ. ಟಿಕೆಟ್ ಆಮಿಷ ಒಡ್ಡಿ 7 ಕೋಟಿ ರೂಪಾಯಿ ಹಣವನ್ನು ವಸೂಲಿ ಮಾಡಿದ್ರಂತೆ. ಇದು ಚೈತ್ರಾ ಕುಂದಾಪುರ ಹಾಗೂ ಅವರ ಸಂಗಡಿಗರ ವಿರುದ್ಧ ಕೇಳಿ ಬಂದಿರೋ ಆರೋಪ. ಈ ಆರೋಪದ ಮೇಲೆ ಬೆಂಗಳೂರಿನ ಸಿಸಿಬಿ ಪೊಲೀಸರು ಚೈತ್ರಾ ಕುಂದಾಪುರ ಅವರನ್ನು ಅರೆಸ್ಟ್ ಮಾಡಿದ್ದರು, ಕೆಲವು ದಿನಗಳ ಕಾಲ ಜೈಲಿನಲ್ಲಿದ್ದ ಚೈತ್ರಾ ಬಳಿಕ ಜಾಮೀನಿನ ಮೇಲೆ ಬಂದಿದ್ದಾರೆ. ಇದೀಗ ಬಿಗ್ ಬಾಸ್ ಮನೆಗೆ ಚೈತ್ರಾ ಕುಂದಾಪುರ ಕಾಲಿಟ್ಟಿದ್ದಾರೆ. ಹಿಂದುತ್ವದ ಪ್ರಖರ ಭಾಷಣಗಾರ್ತಿಯಾಗಿರುವ ಚೈತ್ರಾ ಕುಂದಾಪುರ ಬಿಗ್ ಬಾಸ್ ಮನೆಯಲ್ಲಿ ಹೇಗಿರುತ್ತಾರೆ ಅನ್ನೊಂದು ನೋಡಬೇಕಿದೆ.

No comments:

Post a Comment

ಬೆಂಗಳೂರು – ಮಂಗಳೂರು ಬಸ್ಸು ತಡೆದು ಮಾರಕಾಸ್ತ್ರದಿಂದ ಹಲ್ಲೆ- ಪುಡಿ ರೌಡಿಯ ಕಾಲಿಗೆ ಗುಂಡೇಟು, ಅರೆಸ್ಟ್‌

 ಹಾಸನ: ಬೆಂಗಳೂರಿನಿಂದ ಮಂಗಳೂರಿಗೆ  ತೆರಳುತ್ತಿದ್ದ ಖಾಸಗಿ ಬಸ್ ತಡೆದು ಲಾಂಗ್‌ನಿಂದ ಹಲ್ಲೆ ಮಾಡಿ ಅಟ್ಟಹಾಸ ಮೆರೆದಿದ್ದ ಪುಡಿರೌಡಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘ...