Thursday, 30 January 2025

ಬೆಂಗಳೂರು – ಮಂಗಳೂರು ಬಸ್ಸು ತಡೆದು ಮಾರಕಾಸ್ತ್ರದಿಂದ ಹಲ್ಲೆ- ಪುಡಿ ರೌಡಿಯ ಕಾಲಿಗೆ ಗುಂಡೇಟು, ಅರೆಸ್ಟ್‌

 ಹಾಸನ: ಬೆಂಗಳೂರಿನಿಂದ ಮಂಗಳೂರಿಗೆ  ತೆರಳುತ್ತಿದ್ದ ಖಾಸಗಿ ಬಸ್ ತಡೆದು ಲಾಂಗ್‌ನಿಂದ ಹಲ್ಲೆ ಮಾಡಿ ಅಟ್ಟಹಾಸ ಮೆರೆದಿದ್ದ ಪುಡಿರೌಡಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ಶಾಂತಿಗ್ರಾಮ ಬಳಿ ನಡೆದಿದೆ.




ಒಂದು ಕೊಲೆ,  ಮೂರು ಕೊಲೆ ಯತ್ನ ಪ್ರಕರಣಗಳ ಆರೋಪಿಯಾಗಿರುವ ಮನುವನ್ನು (23) ಬೆಂಗಳೂರಿನಲ್ಲಿ ಬಂಧಿಸಿ ನಗರ ಠಾಣೆ ಪೊಲೀಸರು ಹಾಸನಕ್ಕೆ ಕರೆ ತರುತ್ತಿದ್ದರು. ಈ ವೇಳೆ ಮೂತ್ರ ವಿಸರ್ಜನೆಗೆ ಅನುಮತಿ ನೀಡಬೇಕೆಂದು ಕೇಳಿದ್ದಾನೆ.

ಒಂದು ಕೊಲೆ,  ಮೂರು ಕೊಲೆ ಯತ್ನ ಪ್ರಕರಣಗಳ ಆರೋಪಿಯಾಗಿರುವ ಮನುವನ್ನು (23) ಬೆಂಗಳೂರಿನಲ್ಲಿ ಬಂಧಿಸಿ ನಗರ ಠಾಣೆ ಪೊಲೀಸರು ಹಾಸನಕ್ಕೆ ಕರೆ ತರುತ್ತಿದ್ದರು. ಈ ವೇಳೆ ಮೂತ್ರ ವಿಸರ್ಜನೆಗೆ ಅನುಮತಿ ನೀಡಬೇಕೆಂದು ಕೇಳಿದ್ದಾನೆ.

ಶಾಂತಿಗ್ರಾಮ ಬಳಿ ರಸ್ತೆ ಬದಿ ಜೀಪ್ ನಿಲ್ಲಿಸಿ ಮೂತ್ರ ವಿಸರ್ಜನೆಗೆ ಅವಕಾಶ ನೀಡಿದಾಗ ಪೊಲೀಸರ ಮೇಲೆಯೇ ಕಲ್ಲಿನಿಂದ ಹಲ್ಲೆ ನಡೆಸಿ ಪರಾರಿಯಾಗಲು ಮನು ಯತ್ನಿಸಿದ್ದಾನೆ.ಈ ಸಂದರ್ಭದಲ್ಲಿ ಹಾಸನ ನಗರಠಾಣೆ ಇನ್ಸ್‌ಪೆಕ್ಟರ್ ಮೋಹನ್‌ಕೃಷ್ಣ ಆತ್ಮರಕ್ಷಣೆಗಾಗಿ ಆರೋಪಿ ಕಾಲಿಗೆ ಗುಂಡು ಹಾರಿಸಿದ್ದಾರೆ. ನಂತರ ಸಬ್‌ಇನ್ಸ್‌ಪೆಕ್ಟರ್ ಕುಮಾರ್ ಆರೋಪಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ‌.

ಬುಧವಾರ ನಸುಕಿನ ಜಾವ 2 ಗಂಟೆಗೆ ಬೈಪಾಸ್‌ ರಸ್ತೆಯ ದೇವರಾಯಪಟ್ಟಣದ ಬಳಿ ಬೆಂಗಳೂರಿನಿಂದ ಮಂಗಳೂರಿಗೆ ಖಾಸಗಿ ಬಸ್‌ ಸಂಚರಿಸುತ್ತಿತ್ತು. ಈ ಸಂದರ್ಭದಲ್ಲಿ ಕೆಎ 51 ಎಂವಿ 8912 ನಂಬರ್‌ನ ಸ್ವಿಫ್ಟ್ ಕಾರನ್ನು ಬಸ್ಸಿನ ಮುಂದೆ ಮನು ಅಡ್ಡ ಹಾಕಿ ನಿಲ್ಲಿಸಿದ್ದ. ಕಾರಿನಿಂದ ಇಳಿದ ಬಳಿಕ ಗಲಾಟೆ ಮಾಡಿ ಬಸ್ಸಿನ ಗ್ಲಾಸನ್ನು ಒಡೆದು ಹಾಕಿದ್ದ. ಪುಡಿ ರೌಡಿ ಮನುವಿನ ಹುಚ್ಚಾಟ ಬಸ್ಸಿನಲ್ಲಿದ್ದವರ ಮೊಬೈಲಿನಲ್ಲಿ ಸೆರೆಯಾಗಿತ್ತು. ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾಗುತ್ತಿದ್ದಂತೆ ಆರೋಪಿಯ ಬಂಧನಕ್ಕೆ ಪೊಲೀಸರು ಬಲೆಗೆ.

ಬಸ್ಸಿಗೆ ಹೀಗೆ ಆದರೆ ಇನ್ನೂ ಕಾರು, ಬೈಕಿನಂತ ವಾಹನದಲ್ಲಿ ‌ಪ್ರಯಾಣ ಮಾಡುವವರು ಏನು ಮಾಡಬೇಕು ಎಂದು ನೆಟ್ಟಿಗರು ಪೊಲೀಸರನ್ನು ಪ್ರಶ್ನಿಸಿ ತರಾಟೆಗೆ ತೆಗೆದುಕೊಂಡಿದ್ದರು.

Saturday, 5 October 2024

ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

 ದಕ್ಷಿಣಕನ್ನಡ: ಮಾಜಿ ಶಾಸಕ ಮೊಯಿದೀನ್ ಬಾವಾ ಅವರ ಸಹೋದರ ಮಮ್ತಾಜ್ ಅಲಿ ಅವರ ಕಾರು ಅಪಘಾತಗೊಂಡ ಸ್ಥಿತಿಯಲ್ಲಿ ಅ.6ರ ರವಿವಾರ ಕೂಳೂರು ಸೇತುವೆ ಮೇಲೆ ಪತ್ತೆಯಾಗಿದ್ದು, ಅವರು ನಾಪತ್ತೆಯಾಗಿದ್ದಾರೆ.



ರವಿವಾರ ಮುಂಜಾನೆ ಘಟನೆ ಬೆಳಕಿಗೆ ಬಂದಿದ್ದು, ಅಗ್ನಿಶಾಮಕ ಹಾಗೂ ಈಜು ತಜ್ಞರು ನದಿಯಲ್ಲಿ ಹುಡುಕಾಟ ಆರಂಭಿಸಿದ್ದರೆ, ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿ ಚುರುಕಿನ ತನಿಖೆ ಕೈಗೊಂಡಿದ್ದಾರೆ.



ಮಮ್ತಾಜ್ ಅಲಿ ಅವರು ತನ್ನ ಮಗಳಿಗೆ ವಾಟ್ಸಪ್ ಮೂಲಕ ಇನ್ನು ನಾನು ಹಿಂತಿರುಗಿ ಬರುವುದಿಲ್ಲ ಎಂಬ ಸಂದೇಶ ಕೂಡ ರವಾನಿಸಿದ್ದಾರೆ ಎನ್ನಲಾಗಿದ್ದು, ಆತಂಕಕ್ಕೆ ಕಾರಣವಾಗಿದೆ.



Monday, 30 September 2024

ಕಾರ್ಕಳ-ಧರ್ಮಸ್ಥಳ ಹೆದ್ದಾರಿಯಲ್ಲಿ ಭೀಕರ ಅಪಘಾತ: ತಂದೆ ಜತೆಗೆ ಮೂವರು ಮಕ್ಕಳು ಸಾವು. ಉಡುಪಿ, (ಸೆಪ್ಟೆಂಬರ್ 30): ಕಾರ್ಕಳ-ಧರ್ಮಸ್ಥಳ ಹೆದ್ದಾರಿಯಲ್ಲಿ ಇಂದು (ಸೆಪ್ಟೆಂಬರ್ 30) ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ಹೊಸ್ಮಾರುನ ಪಾಜೆಗುಡ್ಡೆ ಬಳಿ ಬೈಕ್​ಗೆ ಲಾರಿ ಡಿಕ್ಕಿಯಾಗಿದೆ. ಪರಿಣಾಮ ಬೈಕ್​ನಲ್ಲಿ ತೆರಳುತ್ತಿದ್ದ ತಂದೆ ಹಾಗೂ ಮೂವರು ಮಕ್ಕಳು ಸಾವನ್ನಪ್ಪಿದ್ದಾರೆ. ಸುರೇಶ್ ಆಚಾರ್ಯ(36), ಸಮೀಕ್ಷಾ(7), ಸುಶ್ಮಿತಾ(5) ಸುಶಾಂತ್(2) ಮೃತರು. ಇನ್ನು ಸುರೇಶ್ ಆಚಾರ್ಯ ಪತ್ನಿ ಮೀನಾಕ್ಷಿ ಆಚಾರ್ಯ(32) ಸ್ಥಿತಿ ಗಂಭೀರವಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

 


ಉಡುಪಿ, (ಸೆಪ್ಟೆಂಬರ್ 30): ಕಾರ್ಕಳ-ಧರ್ಮಸ್ಥಳ ಹೆದ್ದಾರಿಯಲ್ಲಿ ಇಂದು (ಸೆಪ್ಟೆಂಬರ್ 30) ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ಹೊಸ್ಮಾರುನ ಪಾಜೆಗುಡ್ಡೆ ಬಳಿ ಬೈಕ್​ಗೆ ಲಾರಿ ಡಿಕ್ಕಿಯಾಗಿದೆ. ಪರಿಣಾಮ ಬೈಕ್​ನಲ್ಲಿ ತೆರಳುತ್ತಿದ್ದ ತಂದೆ ಹಾಗೂ ಮೂವರು ಮಕ್ಕಳು ಸಾವನ್ನಪ್ಪಿದ್ದಾರೆ. ಸುರೇಶ್ ಆಚಾರ್ಯ(36), ಸಮೀಕ್ಷಾ(7), ಸುಶ್ಮಿತಾ(5) ಸುಶಾಂತ್(2) ಮೃತರು. ಇನ್ನು ಸುರೇಶ್ ಆಚಾರ್ಯ ಪತ್ನಿ ಮೀನಾಕ್ಷಿ ಆಚಾರ್ಯ(32) ಸ್ಥಿತಿ ಗಂಭೀರವಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

Sunday, 29 September 2024

ಬಿಗ್ ಬಾಸ್ ಮನೆಗೆ ಕರಾವಳಿಯ ಹಿಂದೂ ಫೈರ್ ಬ್ರ್ಯಾಂಡ್ ಚೈತ್ರಾ ಕುಂದಾಪುರ.

ಬೆಂಗಳೂರು ಸೆಪ್ಟೆಂಬರ್ 29: ಕರಾವಳಿಯ ಹಿಂದೂ ಫೈರ್ ಬ್ರ್ಯಾಂಡ್ ಖ್ಯಾತಿಯ ಪ್ರಖರ ಭಾಷಣಗಾರ್ತಿ ಚೈತ್ರಾ ಕುಂದಾಪುರ ಈ ಬಾರಿ ಬಿಗ್ ಬಾಸ್ ಸೀಸನ್ 11 ರ ಮೂರನೆ ಸ್ಪರ್ಧಿಯಾಗಿ ಬಿಗ್ ಬಾಸ್ ಮನೆಗೆ ತೆರಳಿದ್ದಾರೆ.




ಚೈತ್ರಾ ಕುಂದಾಪುರ ಅವರು ಉಡುಪಿ ಜಿಲ್ಲೆ ಕುಂದಾಪುರದವರು.. ಪ್ರಖರ ಭಾಷಣಕಾರರಾಗಿ ಗಮನ ಸೆಳೆದವರು.ಕುಂದಾಪುರದಲ್ಲಿ ಪಿಯುಸಿವರೆಗೆ ವ್ಯಾಸಂಗ ಮಾಡಿದ ಚೈತ್ರಾ, ಕೊಣಾಜೆಯಲ್ಲಿ ಪದವಿ ಪೂರ್ಣಗೊಳಿಸಿದರು. ಮಂಗಳೂರು ವಿಶ್ವ ವಿದ್ಯಾಲಯದ ಪದವೀಧರೆಯಾದ ಚೈತ್ರಾ ಕುಂದಾಪುರ, ಕೆಲ ಕಾಲ ಬೆಂಗಳೂರಿನಲ್ಲಿ ಖಾಸಗಿ ವಾಹಿನಿಯಲ್ಲಿ ಕೆಲಸ ಮಾಡಿದ್ದರು.​ ಉಡುಪಿಯ ಸ್ಪಂದನ ಟಿವಿಯ ನಿರೂಪಕಿಯಾಗಿದ್ದರು ಕಾಲೇಜು ದಿನಗಳಿಂದಲೇ ಎಬಿವಿಪಿ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದರು. ಪತ್ರಕರ್ತೆಯಾಗಿ, ನಿರೂಪಕಿಯಾಗಿ ಭಾಷಣಕಾರರಾಗಿ ಗಮನ ಸೆಳೆದಿರೋ ಇವರು ಪ್ರೇಮ ಪಾಶ ಅನ್ನೋ ಚೊಚ್ಚಲ ಕೃತಿ ಬರೆದಿದ್ದಾರೆ.




ಉಡುಪಿ ಜಿಲ್ಲೆ ಬೈಂದೂರಿನ ಉದ್ಯಮಿ ಹಾಗೂ ಸಮಾಜ ಸೇವಕ ಗೋವಿಂದ ಬಾಬು ಪೂಜಾರಿ ಅವರಿಗೆ ಚೈತ್ರಾ ಕುಂದಾಪುರ ಮೋಸ ಮಾಡಿದ್ದಾರಂತೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸ್ತೇನೆ ಅಂತಾ ಚೈತ್ರಾ ಕುಂದಾಪುರ ನಂಬಿಸಿದ್ದರಂತೆ. ಟಿಕೆಟ್ ಆಮಿಷ ಒಡ್ಡಿ 7 ಕೋಟಿ ರೂಪಾಯಿ ಹಣವನ್ನು ವಸೂಲಿ ಮಾಡಿದ್ರಂತೆ. ಇದು ಚೈತ್ರಾ ಕುಂದಾಪುರ ಹಾಗೂ ಅವರ ಸಂಗಡಿಗರ ವಿರುದ್ಧ ಕೇಳಿ ಬಂದಿರೋ ಆರೋಪ. ಈ ಆರೋಪದ ಮೇಲೆ ಬೆಂಗಳೂರಿನ ಸಿಸಿಬಿ ಪೊಲೀಸರು ಚೈತ್ರಾ ಕುಂದಾಪುರ ಅವರನ್ನು ಅರೆಸ್ಟ್ ಮಾಡಿದ್ದರು, ಕೆಲವು ದಿನಗಳ ಕಾಲ ಜೈಲಿನಲ್ಲಿದ್ದ ಚೈತ್ರಾ ಬಳಿಕ ಜಾಮೀನಿನ ಮೇಲೆ ಬಂದಿದ್ದಾರೆ. ಇದೀಗ ಬಿಗ್ ಬಾಸ್ ಮನೆಗೆ ಚೈತ್ರಾ ಕುಂದಾಪುರ ಕಾಲಿಟ್ಟಿದ್ದಾರೆ. ಹಿಂದುತ್ವದ ಪ್ರಖರ ಭಾಷಣಗಾರ್ತಿಯಾಗಿರುವ ಚೈತ್ರಾ ಕುಂದಾಪುರ ಬಿಗ್ ಬಾಸ್ ಮನೆಯಲ್ಲಿ ಹೇಗಿರುತ್ತಾರೆ ಅನ್ನೊಂದು ನೋಡಬೇಕಿದೆ.

ಉಡುಪಿ: ಖ್ಯಾತ ಛಾಯಾಗ್ರಾಹಕ ಗುರುದತ್ ಕಾಮತ್ ನಿಧನ

ಉಡುಪಿ: ಖ್ಯಾತ ಹಿರಿಯ ಛಾಯಾಗ್ರಾಹಕ ಗುರುದತ್ ಕಾಮತ್ (58) ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು ನಿಧನ ಹೊಂದಿದರು.


ಗುರುದತ್ ಕಾಮತ್ 


ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು ಕೊನೆಯುಸಿರೆಳೆದಿದ್ದಾರೆ.

ಬಹುಮುಖ ಪ್ರತಿಭೆಯ ಛಾಯಾಚಿತ್ರ ಕಲಾವಿದರಾದ ಕಾಮತ್ ರವರ ಗರಡಿಯಲ್ಲಿ ಹಲವಾರು ಛಾಯಾಚಿತ್ರ ಕಲಾವಿದರು ನೆಲೆಕಂಡಿಕೊಂಡಿದ್ದಾರೆ. ಛಾಯಾಗ್ರಹಣ ಕಾರ್ಯಾಗಾರವನ್ನು ಛಾಯಾ ಗ್ರಾಹಕರಿಗೋಸ್ಕರ ನಿರಂತರ ನಡೆಸುತಿದ್ದರು. 


ತಮ್ಮ ಕೈಚಳಕದ ಛಾಯಾಚಿತ್ರಗಳಿಗೆ ದೇಶ ವಿದೇಶಗಳಿಂದ ಹಲವು ಪ್ರಶಸ್ತಿಗಳನ್ನು ಪಡೆದಿದ್ದರು. ಶಿರೂರು ಶ್ರೀಗಳ ಪರ್ಯಾಯದ ಸಮಯದಲ್ಲಿ ದಿನ ನಿತ್ಯವೂ ಶ್ರೀ ಕೃಷ್ಣ ಪರಮಾತ್ಮನ ಅಲಂಕಾರದ ಛಾಯಾಚಿತ್ರ ಗಳನ್ನು ಹಾಗೂ ಶ್ರೀ ಕೃಷ್ಣ ಮಠದ ಎಲ್ಲಾ ಉತ್ಸವದ,  ಹಬ್ಬ ಹರಿ ದಿನಗಳ ಛಾಯಾ ಚಿತ್ರ ಗಳನ್ನು ಭಗದ್ಭಕ್ತರಿಗೆ ತಲುಪಿಸುತ್ತಿದ್ದ ಶ್ರೀ ಕೃಷ್ಣ ಮಠದೊಂದಿಗೆ ಅವಿನಾಭಾವ ಸಂಬಂಧ ಹೊಂದಿದ್ದರು.

Monday, 23 September 2024

ಪುತ್ತೂರು – ನವಜಾತ ಶಿಶು ಕೊಂಡೊಯ್ಯುತ್ತಿದ್ದ ಅಂಬ್ಯುಲೆನ್ಸ್ ಅಪಘಾತ

 ಪುತ್ತೂರು ಸೆಪ್ಟೆಂಬರ್ 24: ಅಂಬ್ಯುಲೆನ್ಸ್ ಗೆ ಪಿಕಪ್ ವೊಂದು ಡಿಕ್ಕಿ ಹೊಡೆದ ಘಟನೆ ಘಟನೆ ಪುತ್ತೂರು ತಾಲೂಕಿನ ಮುರ ಎಂಬಲ್ಲಿ ಸೋಮವಾರ ತಡರಾತ್ರಿ ನಡೆದಿರುವ ಬಗ್ಗೆ ವರದಿಯಾಗಿದೆ.




ಸುಳ್ಯದ ಆಸ್ಪತ್ರೆಯಲ್ಲಿ ಜನಿಸಿದ ನವಜಾತ ಶಿಶುವಿಗೆ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ಅಂಬ್ಯುಲೆನ್ಸ್ ನಲ್ಲಿ ಕರೆದುಕೊಂಡು ಹೋಗುವ ವೇಳೆ ಈ ಅಪಘಾತ ಸಂಭವಿಸಿದೆ. ಎದುರು ದಿಕ್ಕಿನಿಂದ ಬಂದ ಪಿಕಪ್ ಆಂಬ್ಯುಲೆನ್ಸ್ ಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಇದರಿಂದಾಗಿ ಆಂಬ್ಯುಲೆನ್ಸ್ ನಲ್ಲಿದ್ದ ಮಗು ಹಾಗೂ ಚಾಲಕನಿಗೆ ಸಣ್ಣ- ಪುಟ್ಟ ಗಾಯಗಳಾಗಿವೆ. ಕೂಡಲೇ ಬೇರೆ ವಾಹನದಲ್ಲಿ ಮಗುವನ್ನು ಮತ್ತು ಮನೆಯವರನ್ನು ಮಂಗಳೂರಿಗೆ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ.

Sunday, 22 September 2024

ಬೆಂಗಳೂರು ಮಹಾಲಕ್ಷ್ಮಿ ಕೊಲೆ ಕೇಸ್​ಗೆ ಮತ್ತಷ್ಟು ಟ್ವಿಸ್ಟ್: ಪದೇ ಪದೇ ಗಂಡನಿಗೆ ಕಿರುಕುಳಸ್ನೇಹಿತ ಅಶ್ರಫ್​ ಸೇರಿದಂತೆ ನಾಲ್ವರ ಮೇಲೆ ಕುಟುಂಬಸ್ಥರ ಅನುಮಾನ,

ಬೆಂಗಳೂರಿನ ವೈಯಾಲಿಕಾವಲ್‌ನಲ್ಲಿ ಕೊಲೆಯಾದ ಮಹಾಲಕ್ಷ್ಮೀ ಕಿರುಕುಳಕ್ಕೆ ಪತಿ ಹೇಮಂತ್‌ ಬೇಸತ್ತಿದ್ದ. ಪದೇಪದೆ ಗಂಡನಿಗೆ ಕಿರುಕುಳ ನೀಡಿ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದಳು. ಮಹಾಲಕ್ಷ್ಮೀ ಆಗಾಗ ಹಣ ಬೇಕೆಂದು ಗಂಡನನ್ನು ಪೀಡಿಸುತ್ತಿದ್ದಳು. ಹಣ ಕೊಡದಿದ್ದರೆ ಮೊಬೈಲ್ ಶಾಪ್ ಬಳಿಯೇ ಹಲ್ಲೆ ಮಾಡುತ್ತಿದ್ದಳು ಎನ್ನಲಾಗಿದೆ. ಆ ಮೂಲಕ ಮಹಾಲಕ್ಷ್ಮಿ ಕೊಲೆ ಪ್ರಕರಣಕ್ಕೆ‌ ಮತ್ತಷ್ಟು ಟ್ವಿಸ್ಟ್ ಸಿಕ್ಕಿದೆ.


ನೆಲಮಂಗಲ, ಸೆಪ್ಟೆಂಬರ್​ 22: 

ಬೆಂಗಳೂರಿನ ವೈಯಾಲಿಕಾವಲ್‌ನಲ್ಲಿ ಮಹಾಲಕ್ಷ್ಮೀ ಕೊಲೆ ಪ್ರಕರಣಕ್ಕೆ. ಸಂಬಂಧಿಸಿದಂತೆ ಇದೀಗ ಹಲವು ಅನುಮಾನಗಳು ಹುಟ್ಟಿಕೊಂಡಿವೆ. ಪರಸಂಗದ ಪೀಕಲಾಟಕ್ಕೆ ಮಹಿಳೆ ಕೊಲೆಯಾದಳಾ ಎನ್ನುವ ಅನುಮಾನ ವ್ಯಕ್ತವಾಗಿದೆ. ಸದ್ಯ ಈ ಪ್ರಕರಣ ಪೊಲೀಸರಿಗೆ ಚಾಲೆಂಜಿಂಗ್​ ಆಗಿದೆ. ಇದರ ಮಧ್ಯೆ ಮಹಾಲಕ್ಷ್ಮಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ.



ಪದೇಪದೆ ಗಂಡನಿಗೆ ಕಿರುಕುಳ

ಬೆಂಗಳೂರಿನ ವೈಯಾಲಿಕಾವಲ್‌ನಲ್ಲಿ ಕೊಲೆಯಾದ ಮಹಾಲಕ್ಷ್ಮೀ ಕಿರುಕುಳಕ್ಕೆ ಪತಿ ಹೇಮಂತ್‌ ಬೇಸತ್ತಿದ್ದ. ಪದೇಪದೆ ಗಂಡನಿಗೆ ಕಿರುಕುಳ ನೀಡಿ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದಳು. ಮಹಾಲಕ್ಷ್ಮೀ ಆಗಾಗ ಹಣ ಬೇಕೆಂದು ಗಂಡನನ್ನು ಪೀಡಿಸುತ್ತಿದ್ದಳು. ಹಣ ಕೊಡದಿದ್ದರೆ ಮೊಬೈಲ್ ಶಾಪ್ ಬಳಿಯೇ ಹಲ್ಲೆ ಮಾಡುತ್ತಿದ್ದಳು. ಹೇಮಂತ್ ದಾಸ್‌ನ ಎದೆ ಹಾಗೂ ಹೊಟ್ಟೆಗೆ ಕಚ್ಚುತ್ತಿದ್ದಳು. ಹಣದ ವಿಚಾರಕ್ಕೆ, ದಾಂಪತ್ಯದಲ್ಲಿ ಖುಷಿ ಇಲ್ಲವೆಂದು ಪದೇಪದೆ ಜಗಳ ನಡೆಯುತ್ತಿತ್ತು. ಪತ್ನಿ ಕಿರುಕುಳದಿಂದ ಬೇಸತ್ತ ಪತಿ ಹೇಮಂತ್ 2023ರ ಡಿಸೆಂಬರ್‌ 1ರಂದು ನೆಲಮಂಗಲ ಟೌನ್ ಠಾಣೆಗೆ ದೂರು ನೀಡಿದ್ದರು. ಪೊಲೀಸ್ ಠಾಣೆಯಲ್ಲಿ ಇಡೀ ದಿನ ರಾಜಿ ಪಂಚಾಯಿತಿ ನಡೆಸಲಾಗಿತ್ತು.

ಸುಳ್ಳು ಸುದ್ದಿಗಳಿಗೆ ಕಡಿವಾಣ ಹಾಕುವ ಅಗತ್ಯವಿದೆ: ಸಿಎಂ ಸಿದ್ದರಾಮಯ್ಯ

 ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕದಿದ್ದರೆ ಸಮಾಜ, ಪ್ರತಿಯೊಬ್ಬರ ನೆಮ್ಮದಿ ಹಾಳಾಗುತ್ತದೆ. ಯಾರೊಬ್ಬರೂ ನೆಮ್ಮದಿಯಾಗಿ ಬದುಕಲು ಸಾಧ್ಯವಾಗುವುದಿಲ್ಲ. ಹೀಗಾಗಿ, ಸುಳ್ಳು ಸುದ್ದಿಗಳಿಗೆ ಕಡಿವಾಣ ಹಾಕುವ ಕೆಲಸ ಆಗಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.



ಮೈಸೂರು (ಸೆ.21): ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕದಿದ್ದರೆ ಸಮಾಜ, ಪ್ರತಿಯೊಬ್ಬರ ನೆಮ್ಮದಿ ಹಾಳಾಗುತ್ತದೆ. ಯಾರೊಬ್ಬರೂ ನೆಮ್ಮದಿಯಾಗಿ ಬದುಕಲು ಸಾಧ್ಯವಾಗುವುದಿಲ್ಲ. ಹೀಗಾಗಿ, ಸುಳ್ಳು ಸುದ್ದಿಗಳಿಗೆ ಕಡಿವಾಣ ಹಾಕುವ ಕೆಲಸ ಆಗಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮಾನಸ ಗಂಗೋತ್ರಿಯ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಜಿಲ್ಲಾ ಪತ್ರಕರ್ತರ ಸಂಘವು ಆಯೋಜಿಸಿದ್ದ ಪತ್ರಿಕಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಜನರಿಗೆ ಸತ್ಯ ಹೇಳುವ ಕೆಲಸವನ್ನ ಪತ್ರಿಕೆಗಳು ಮಾಡಬೇಕು. ಆದರೆ, ಇತ್ತೀಚೆಗೆ ಸುಳ್ಳು ಸುದ್ದಿ ಸೃಷ್ಟಿಸಿ ಮತ್ತೊಬ್ಬರನ್ನು ತೇಜೋವಧೆ ಮಾಡುವ ಕೆಲಸ ಹೆಚ್ಚಾಗುತ್ತಿದೆ ಎಂದರು.


ಇತ್ತೀಚಿನ ದಿನಗಳಲ್ಲಿ ಫೇಕ್ ನ್ಯೂಸ್ ವೇಗವಾಗಿ ಬೆಳೆಯಲಿಕ್ಕೆ ಪ್ರಾರಂಭವಾಗಿದೆ. ಇದನ್ನ ತಡೆಯದೇ ಹೋದರೆ ಪ್ರಜಾಪ್ರಭುತ್ವ, ಸಂವಿಧಾನದ ಮೌಲ್ಯಗಳು ಉಳಿಯುವುದು ಕಷ್ಟವಾಗಲಿದೆ. ಕುವೆಂಪು ಅವರು ಹೇಳಿದ ಶಾಂತಿಯ ತೋಟ ಆಗೋದು ಕನಸಾಗಲಿದೆ. ಹೀಗಾಗಿ, ಸುದ್ದಿಗಳನ್ನ ಫ್ಯಾಕ್ಟ್ ಚೆಕ್ ಮಾಡಲಿಕ್ಕೆ ಸರ್ಕಾರ ಮುಂದಾಗಿದೆ. ಪೊಲೀಸ್ ಠಾಣೆಗಳಲ್ಲಿ ಪ್ರತ್ಯೇಕ ತಂಡ ಸುಳ್ಳು ಸುದ್ದಿಯ ಫ್ಯಾಕ್ಟ್ ಚೆಕ್ ಮಾಡಲಿದೆ ಎಂದು ಹೇಳಿದರು. ಈ ಸುಳ್ಳು ಸುದ್ದಿಯನ್ನು ಸೃಷ್ಟಿಸಿ, ಪ್ರಕಟಿಸುವುದರಿಂದ ಧಾರ್ಮಿಕ, ಸಾಮಾಜಿಕ ಘರ್ಷಣೆಗಳು ಉಂಟಾಗಿ ನಮ್ಮ ಜೊತೆಯಲ್ಲಿರುವವರಿಗೆ ತೊಂದರೆಯಾಗಲಿದೆ. ಸುಳ್ಳು ಸುದ್ದಿ ಮಾಡೋದು ಯಾರಿಗೂ ಶೋಭೆ ತರುವುದಿಲ್ಲ. ಇದನ್ನು ತಡೆಗಟ್ಟುವ ಕೆಲಸವನ್ನು ನಾವೆಲ್ಲರೂ ಮಾಡಬೇಕು. ಇದು ಎಲ್ಲರ ಜವಾಬ್ದಾರಿಯಾಗಿದೆ ಎಂದರು.


Thursday, 5 September 2024

Sikkim: 800 ಅಡಿ ಆಳದ ಕಮರಿಗೆ ಉರುಳಿದ ಸೇನಾ ವಾಹನ: ನಾಲ್ವರು ಯೋಧರು ಹುತಾತ್ಮ.

ಸಿಕ್ಕಿಂ: ಸಿಕ್ಕಿಂನ ಪಾಕ್ಯೊಂಗ್ ಜಿಲ್ಲೆಯಲ್ಲಿ ಭೀಕರ ಅಪಘಾತವೊಂದು ಸಂಭವಿಸಿದೆ, ಸೇನಾ ವಾಹನವೊಂದು 800 ಅಡಿ ಆಳದ ಕಂದರಕ್ಕೆ ಬಿದ್ದು 4 ಯೋಧರು ಹುತಾತ್ಮರಾಗಿದ್ದಾರೆ.




ಸೇನಾ ವಾಹನವು ಕಡಿದಾದ ಪರ್ವತ ಪ್ರದೇಶದಲ್ಲಿ ಸಂಚರಿಸುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.

ಪಶ್ಚಿಮ ಬಂಗಾಳದ ಪೆಡಾಂಗ್‌ನಿಂದ ಸಿಕ್ಕಿಂನ ಜುಲುಕ್‌ಗೆ ಪ್ರಯಾಣಿಸುತ್ತಿದ್ದರು ಎನ್ನಲಾಗಿದ್ದು ಈ ವೇಳೆ ಸಿಲ್ಕ್ ರೂಟ್ ಎಂದೂ ಕರೆಯಲ್ಪಡುವ ರೀನಾಕ್ ರೊಂಗ್ಲಿ ರಾಜ್ಯ ಹೆದ್ದಾರಿಯ ದಲೋಪ್‌ಚಂದ್ ದಾರಾ ಬಳಿ ವಾಹನ ಕಮರಿಗೆ ಉರುಳಿ ಬಿದ್ದಿದೆ, ಅಪಘಾತದಲ್ಲಿ ಕನಿಷ್ಠ ನಾಲ್ವರು ಭಾರತೀಯ ಸೇನಾ ಯೋಧರು ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.




ಅಪಘಾತ ಸಂಭವಿಸಿದ ಕೂಡಲೇ ರಕ್ಷಣಾ ತಂಡ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದರೂ ನಾಲ್ವರು ಯೋಧರು ಸ್ಥಳದಲ್ಲೇ ಮೃತಪಟ್ಟಿದ್ದರು ಎನ್ನಲಾಗಿದೆ. ಯೋಧರನ್ನು ಮಧ್ಯಪ್ರದೇಶದ ಸೇನಾ ವಾಹನ ಚಾಲಕ ಪ್ರದೀಪ್ ಪಟೇಲ್, ಮಣಿಪುರದ ಕುಶಲಕರ್ಮಿ ಡಬ್ಲ್ಯೂ ಪೀಟರ್, ಹರಿಯಾಣದ ನಾಯಕ್ ಗುರ್ಸೇವ್ ಸಿಂಗ್ ಮತ್ತು ತಮಿಳುನಾಡಿನ ಸುಬೇದಾರ್ ಕೆ ಎಂದು ಗುರುತಿಸಲಾಗಿದೆ. ಎಲ್ಲಾ ಸೇನಾ ಸಿಬ್ಬಂದಿಗಳು ಪಶ್ಚಿಮ ಬಂಗಾಳದ ಬಿನಾಗೂರಿನ ಘಟಕಕ್ಕೆ ಸೇರಿದವರು ಎನ್ನಲಾಗಿದೆ.

Wednesday, 28 August 2024

ಕೋಲ್ಕತ್ತ: ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಹೊಸದಿಲ್ಲಿ: ಕೋಲ್ಕತಾದ ಆರ್‌ಜಿ ಕಾರ್‌ ಆಸ್ಪತ್ರೆಯಲ್ಲಿ ನಡೆದ ವೈದ್ಯೆ ಅತ್ಯಾಚಾರ-ಹತ್ಯೆ ಪ್ರಕರಣ ಸಂಬಂಧ ರಾಷ್ಟ್ರಪತಿ ದ್ರೌಪದಿ ಮುರ್ಮು ಮೊದಲ ಬಾರಿ ಪ್ರತಿಕ್ರಿಯೆ ನೀಡಿದ್ದಾರೆ.





“ಈ ಘಟನೆಯಿಂದ ನಾನು ಭೀತಳಾಗಿದ್ದೇನೆ. ಸಮಾಜದ ಸಾಮೂಹಿಕ ಮರೆವಿನ ಪರಿಣಾಮದಿಂದ ಈ ಅಸಹ್ಯದ ಕೃತ್ಯ ನಡೆದಿದೆ’ ಎಂದು ಹೇಳಿದ್ದಾರೆ.

ಪಿಟಿಐ ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಮುರ್ಮು, “ಹೆಣ್ಣನ್ನು ಗಂಡಿನಂತೆಯೇ ಪೂರ್ಣ ರೀತಿಯಲ್ಲಿ ಮನುಷ್ಯರಂತೆ ಕಾಣದಿರುವುದು, ಕಡಿಮೆ ಶಕ್ತಿಶಾಲಿ, ಕಡಿಮೆ ಸಮರ್ಥಳು, ಕಡಿಮೆ ಬುದ್ಧಿವಂತಳು ಎಂದು ನೋಡುವ ಹೀನಾಯ ಮನಃಸ್ಥಿತಿಯಿಂದ ಕ್ರೂರ ಅತ್ಯಾಚಾರಗಳು ಸಂಭವಿಸುತ್ತಿವೆ. ಯಾವ ನಾಗರಿಕ ಸಮಾಜವೂ ತನ್ನ ಮಗಳು, ಸಹೋದರಿಯರನ್ನು ಇಂತಹ ದೌರ್ಜನ್ಯಕ್ಕೆ ಒಳಪಡಿಸುವುದಿಲ್ಲ. ಇದು ಅತಿಯಾಯಿತು. 2012ರಲ್ಲಿ ದಿಲ್ಲಿಯಲ್ಲಿ “ನಿರ್ಭಯಾ’ ಪ್ರಕರಣ ನಡೆದು 12 ವರ್ಷಗಳಾಗಿವೆ. ತದನಂತರವೂ ಅಸಂಖ್ಯಾಕ ಅತ್ಯಾಚಾರಗಳು ನಡೆದಿವೆ. ಈ ಸಾಮೂಹಿಕ ಮರೆವು ಅಸಹ್ಯಕರ’ ಎಂದು ಮುರ್ಮು ಹೇಳಿದ್ದಾರೆ.

“ಇತಿಹಾಸವನ್ನು ಎದುರಿಸಲು ಹೆದರುವ ಸಮಾಜಗಳು ಮಾತ್ರ ಸಾಮೂಹಿಕ ಮರೆವಿಗೆ ಶರಣಾಗುತ್ತವೆ. ಭಾರತ ಇತಿಹಾಸವನ್ನು ಎಲ್ಲ ರೀತಿಯಿಂದ ಎದುರಿಸಲೇಬೇಕು. ಇಂತಹ ವಿಕೃತಿಗಳ ವಿರುದ್ಧ ಸಮಗ್ರವಾದ ಕ್ರಮ ತೆಗೆದುಕೊಂಡು, ಈಗಲೇ ಅದನ್ನು ಹೊಸಕಿ ಹಾಕೋಣ’ ಎಂದು ರಾಷ್ಟ್ರಪತಿ ಮುರ್ಮು ಖಾರವಾದ ಶಬ್ದಗಳಲ್ಲಿ ಹೇಳಿದ್ದಾರೆ.

ಬಳ್ಳಾರಿ ಸೆಂಟ್ರಲ್ ಜೈಲಿಗೆ ಟಿಟಿ ವಾಹನದಲ್ಲಿ ನಟ ದರ್ಶನ್ ಶಿಫ್ಟ್

ಬೆಂಗಳೂರು : ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ಅವರನ್ನು ಇಂದು ಬೆಳ್ಳಂಬೆಳಗ್ಗೆ ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲಾಗಿದೆ ಎಂದು ತಿಳಿದು ಬಂದಿದೆ. ದರ್ಶನ್ ಕಾಣಬಾರದು ಎನ್ನುವ ಕಾರಣಕ್ಕೆ ಬೊಲೆರೋ ಕಾರಿನ ಒಳಗೆ ಕರ್ಟನ್ ಹಾಕಲಾಗಿತ್ತು. ಬಳಿಕ ಬೆಲೊರೊ ವಾಹನದಿಂದ ದರ್ಶನ್ ರನ್ನು ಟಿಟಿ ವಾಹನಕ್ಕೆ ಶಿಫ್ಟ್ ಮಾಡಲಾಗಿತ್ತು. ಸದ್ಯ ಜೈಲಿನ ನಿಯಮ ಉಲ್ಲಂಘನೆ ಮಾಡಿದ ಆರೋಪ ದರ್ಶನ್ ಮೇಲೆ ಇದೆ.



ಇನ್ನು ರೇಣುಕಾ ಸ್ವಾಮಿ ಕೊಲೆ ಆರೋಪಿಗಳನ್ನು ಬೇರೆ ಜೈಲಿಗೆ ಶಿಫ್ಟ್ ಮಾಡುವ ಆದೇಶವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದರು. ಅದರಂತೆ ಅವರನ್ನು ಶಿಫ್ಟ್ ಮಾಡಲಾಗುತ್ತಿದೆ. ರೇಣುಕಾ ಸ್ವಾಮಿ ಕೊಲೆ ಕೇಸ್‌ಗೆ ಸಂಬಂಧಿಸಿ ದರ್ಶನ್ ಅವರು ಜೂನ್ 11ರಂದು ಬಂಧನಕ್ಕೆ ಒಳಗಾದರು. ಸೆಪ್ಟೆಂಬರ್ 11ಕ್ಕೆ ದರ್ಶನ್ ಬಂಧನಕ್ಕೆ ಒಳಗಾಗಿ ಮೂರು ತಿಂಗಳು ಕಳೆಯಲಿದೆ.

Friday, 9 August 2024

ನಾಗರಪಂಚಮಿಗೆ ಇಲ್ಲಿ ಜೀವಂತ ಹಾವಿಗೆ ಪೂಜೆ.

ಇಂದು ರಾಜ್ಯದೆಲ್ಲಡೆ ನಾಗರಪಂಚಮಿ ಸಂಭ್ರಮ, ನಾಗರಪಂಚಮಿಯಂದು ಕರಾವಳಿಯಲ್ಲಿ ನಾಗನ ಕಲ್ಲಿಗೆ ಹಾಲೆರೆದು ಪೂಜಿಸಲಾಗುತ್ತದೆ. ಕೆಲವು ಕಡೆಗಳಲ್ಲಿ ನಾಗನ ಹುತ್ತಕ್ಕೆ ಹಾಲೆರೆದು ನಾಗರಪಂಚಮಿಯನ್ನು ಆಚರಿಸುತ್ತಾರೆ ಆದರೆ. ಇಲ್ಲಿ ಕಾಪುವಿನ ಮಲ್ಲಾರು ನಿವಾಸಿ ಗೋವರ್ಧನ್ ಭಟ್ ಜೀವಂತ ಹಾವಿಗೆ ತನು ಎರೆಯುವುದರ ಮೂಲಕ ನಾಗರಪಂಚಮಿಯನ್ನು ಬಹಳ ವೈಶಿಷ್ಟ್ಯದಿಂದ ಆಚರಿಸಿ ತಮ್ಮ ಇಷ್ಟಾರ್ಥ ನೆರೆವೇರಿಸುವಂತೆ ಪ್ರಾರ್ಥನೆ ಸಲ್ಲಿಸುತ್ತಾರೆ.



ಮಜೂರು ಮಲ್ಲಾರಿನ ಗೋವರ್ಧನ್ ಭಟ್ ಅವರು ಹಾವುಗಳ ರಕ್ಷಣೆ ಮಾಡುತ್ತಾರೆ. ಕಾಪು ಪರಿಸರದಲ್ಲಿ ಚಿರಪರಿಚಿತರು. ಈ ಪರಿಸರದಲ್ಲಿ ಎಲ್ಲೆ ಹಾವುಗಳೂ ಸಂಕಷ್ಟದಲ್ಲಿದ್ದರೆ ಗೋವರ್ಧರನ್ ನೆರೆವಿಗೆ ದಾವಿಸ್ತಾರೆ. ಗಾಯಗೊಂಡ ಹಾವುಗಳನ್ನು ಆರೈಕೆ ಮಾಡಿ ಗುಣಮುಖಗೊಂಡ ನಂತರ ಕಾಡಿಗೆ ಬಿಡುವ ಮೂಲಕ ಹಲವು ಬಾರಿ ಉರಗ ಪ್ರೇಮ ಮೆರೆದಿದ್ದಾರೆ. ಈ ವರೆಗೆ 1೦೦೦ ಕ್ಕೂ ಅಧಿಕ ಹಾವುಗಳ ಆರೈಕೆ ಮಾಡಿದ್ದಾರೆ.

ತನ್ನ ಆರೈಕೆಯಲ್ಲಿ ಇರುವ ಹಾವುಗಳಿಗೆ ತನು ಏರೆಯುವ ಮೂಲಕ ನಾಗರ ಪಂಚಮಿಯನ್ನು ಆಚಾರಿಸುತ್ತಾರೆ.

ಎಲ್ಲಾ ಕಡೆ ನಾಗಕಲ್ಲಿಗೆ ಪೂಜೆ ಪುನಸ್ಕಾರಗಳು ನಡೆಯುತ್ತೆ. ಆದ್ರೆ ಪಂಚಮಿಯಂದು ನಮ್ಮ ಮನೆಯಲ್ಲಿ ನಮ್ಮ ಮನೆಯವರು ಒಟ್ಟಾಗಿ ಜೀವಂತನಾಗನಿಗೆ ಪೂಜೆ ಮಾಡುವುದು ಒಟ್ಟಾಗಿ ಜೀವಂತನಾಗನಿಗೆ ಪೂಜೆ ಮಾಡುವುದು ನಮ್ಮೆಲ್ಲರ ಭಾಗ್ಯ ಎನ್ನುತ್ತಾರೆ ಗೋರ್ವಧನ್ ಭಟ್.




Wednesday, 12 June 2024

ಅತಿಯಾದ ಆತ್ಮವಿಶ್ವಾಸ, ಜನರ ಮಾತು ಕೇಳದ್ದಕ್ಕೆ ಬಿಜೆಪಿಗೆ ಹಿನ್ನಡೆ – ಆರ್‌ಎಸ್‌ಎಸ್‌.

 ನವದೆಹಲಿ: ಬಿಜೆಪಿಗರಿಗೆ  ಅತಿಯಾದ ಆತ್ಮವಿಶ್ವಾಸ, ಜನರ ಮಾತು ಕೇಳದ್ದಕ್ಕೆ ಲೋಕಸಭಾ ಚುನಾವಣೆಯಲ್ಲಿ ಹಿನ್ನಡೆಯಾಗಿದೆ ಎಂದು ರಾಷ್ಟ್ರೀಯ ಸ್ವಯಂ ಸೇವ ಸಂಘದ ಮುಖವಾಣಿ ಆರ್ಗನೈಸರ್‌ ಚಾಟಿ ಬೀಸಿದೆ.



ಲೋಕಸಭೆ ಚುನಾವಣೆಯಲ್ಲಿ ಬಹುಮತ ಕಳೆದುಕೊಂಡಿದ್ದನ್ನು ಪ್ರಸ್ತಾಪಿಸಿ ಆರ್‌ಎಸ್‌ಎಸ್ ಸದಸ್ಯ ರತನ್ ಶಾರದಾ ಅವರು ಆರ್ಗನೈಸರ್‌ನಲ್ಲಿ  ಬಿಜೆಪಿ ಸೋತಿದ್ದು ಎಲ್ಲಿ? ಏನು ಬದಲಾವಣೆ ಮಾಡಬೇಕು ಇತ್ಯಾದಿ ವಿಚಾರದ ಬಗ್ಗೆ ಲೇಖನ ಬರೆದಿದ್ದಾರೆ.ನಿಜವಾದ ಕಾರ್ಯಕರ್ತರು ಎಂದೂ ಅಹಂಕಾರಿ ಆಗಿರುವುದಿಲ್ಲ. ಚುನಾವಣಾ ಪ್ರಚಾರದ ವೇಳೆ ಶಿಸ್ತು ಕಾಪಾಡಲಿಲ್ಲ. ಚುನಾವಣೆಯನ್ನು ನಾವು ಸ್ಪರ್ಧೆ ರೀತಿ ನೋಡಬೇಕೇ ವಿನಃ ಯುದ್ಧದ ರೀತಿಯಲ್ಲಿ ನೋಡಬಾರದು.


ನರೇಂದ್ರ ಮೋದಿ ಅವರ ಪ್ರಭೆಯಲ್ಲಿ ಕೆಲವರು ಗೆದ್ದಿದ್ದಾರೆ. ಆದರೆ ಅವರು ಕೆಲಸ ಮಾಡಲಿಲ್ಲ. ಬಿಜೆಪಿ ನಾಯಕರು ಹಳೆ ಕಾರ್ಯಕರ್ತರನ್ನು ಮರೆದು ಸೆಲ್ಫಿ ಪ್ರಿಯರನ್ನು ಅವಲಂಬಿಸಿದರು. ಸಾಮಾಜಿಕ ಜಾಲತಾಣಗಳ ಪೋಸ್ಟ್‌ನಿಂದ ಚುನಾವಣೆ ಗೆಲ್ಲಲು ಸಾಧ್ಯವಿಲ್ಲ. ಕಾರ್ಯಕರ್ತರು ಓಣಿ ಓಣಿಗಳನ್ನು ಸುತ್ತಾಡಬೇಕು. ಬೀದಿಯಲ್ಲಿರುವ ಜನರ ಅಭಿಪ್ರಾಯಗಳನ್ನು ಸ್ವೀಕರಿಸಬೇಕು.

ಬಿಜೆಪಿ ಅಭ್ಯರ್ಥಿಗಳನ್ನು ಬದಲಾಯಿಸಿ ಬೇರೆ ಪಕ್ಷದಿಂದ ಬಂದ ಅಭ್ಯರ್ಥಿಗಳಿಗೆ ಟಿಕೆಟ್‌ ನೀಡಿದ್ದು ಪರಿಣಾಮ ಬೀರಿತು. ಅಭ್ಯರ್ಥಿಗಳನ್ನು ಬದಲಾಯಿಸಿ ಸ್ಥಳೀಯ ನಾಯಕರಿಗಿಂತ ಪಕ್ಷಾಂತರಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಿದ್ದು ಸೋಲಿಗೆ ಕಾರಣ. ಮೈತ್ರಿ ಮಾಡಿಕೊಂಡಿದ್ದೇವೆ ಎಂಬ ಕಾರಣ ಉತ್ತಮ ಅಭ್ಯರ್ಥಿಗೆ ಟಿಕೆಟ್‌ ನೀಡದೇ ಇರುವುದು ಸರಿಯಲ್ಲ.


ಮಹಾರಾಷ್ಟ್ರದಲ್ಲಿ ಅಜಿತ್‌ ಪವಾರ್‌ ನೇತೃತ್ವದ ಎನ್‌ಸಿಪಿ ಬಣವು ಬಿಜೆಪಿಗೆ ಸೇರಿತು ಈ ಕಾಂಗ್ರೆಸ್ ಸಿದ್ಧಾಂತದ ವಿರುದ್ಧ ಹೋರಾಡಿದ ಕಾರಣ ಬಿಜೆಪಿ ಬೆಂಬಲಿಗರು ಪಕ್ಷವನ್ನು ಬೆಂಬಲಿಸಲಿಲ್ಲ. ಒಂದೇ ಸ್ಟ್ರೋಕ್‌ನಲ್ಲಿ ಬಿಜೆಪಿಯ ಬ್ರ್ಯಾಂಡ್‌ ಮೌಲ್ಯ ಕಡಿಮೆಯಾಯಿತು ಎಂದು ಬರೆದಿದ್ದಾರೆ.

Sunday, 12 May 2024

ರಸ್ತೆ ಅಪಘಾತದಲ್ಲಿ ಖ್ಯಾತ ಕಿರುತೆರೆ ನಟಿ ಪವಿತ್ರ ಜಯರಾಂ ದುರ್ಮರಣ.


ಕಿರುತೆರೆ ನಟಿ ಪವಿತ್ರಾ ಜಯರಾಂ(35) ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಆಂಧ್ರಪ್ರದೇಶದ ಕರ್ನೂಲು ಸಮೀಪ ನಡೆದ ಕಾರು ಅಪಘಾತದಲ್ಲಿ ಅವರು ಮೃತಪಟ್ಟಿರುವುದಾಗಿ ವರದಿಯಾಗಿದೆ.

ಭಾನುವಾರ(ಮೇ.12 ರಂದು) ಅವರು ಪ್ರಯಾಣಿಸುತ್ತಿದ್ದ ಕಾರು ಹಾಗೂ ಬಸ್‌ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ನಟಿ  ಪವಿತ್ರಾ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಮೂಲತಃ ಕನ್ನಡಿಗರಾದ ಪವಿತ್ರ ತೆಲುಗಿನ ʼತ್ರಿನಯನಿʼ ಧಾರವಾಹಿಯಲ್ಲಿ ನಟಿಸಿ ಅಪಾರ ಮನೆ ಮಂದಿಯ ಮನಗೆದ್ದಿದ್ದರು.

ಕನ್ನಡದ ‘ರೋಬೋ ಫ್ಯಾಮಿಲಿ’ ಮೂಲಕ ಕಿರುತೆರೆಗೆ ಪ್ರವೇಶ ಪಡೆದಿದ್ದ ಅವರು, ಮೂಲತಃ ಮಂಡ್ಯ ತಾಲೂಕಿನ ಹನಕೆರೆಯವರು.

ಕನ್ನಡದಲ್ಲಿ ಅವರು ʼರೋಬೋ ಫ್ಯಾಮಿಲಿʼ ಸೇರಿ ʼಜೋಕಾಲಿʼ, ʼನೀಲಿʼ, ʼರಾಧಾರಮಣʼ ಧಾರವಾಹಿಯಲ್ಲಿ ನಟಿಸಿದ್ದರು.

ಘಟನೆಯಲ್ಲಿ ಪವಿತ್ರ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಕಾರಿನಲ್ಲಿ ಅವರ ಕುಟುಂಬಸ್ಥರು ಇದ್ದರು ಎನ್ನಲಾಗುತ್ತಿದೆ. ಈ ಬಗ್ಗೆ ಇನ್ನಷ್ಟೇ ಹೆಚ್ಚಿನ ಮಾಹಿತಿ ಹೊರಬೀಳಬೇಕಿದೆ.

ನಟಿಯ ಹಠಾತ್‌ ನಿಧನಕ್ಕೆ ಕಿರುತೆರೆ ಲೋಕ ಶಾಕ್‌ ಆಗಿದೆ.

Wednesday, 8 May 2024

ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ಅಸ್ತಂಗತ

 ಬೆಳ್ತಂಗಡಿ: ಬೆಳ್ತಂಗಡಿ ಕ್ಷೇತ್ರದ ಮಾಜಿ ಶಾಸಕ, ಬೆಳ್ತಂಗಡಿ ಗುರುದೇವ ಶಿಕ್ಷಣ ಸಂಸ್ಥೆಯ ಅಧ್ಯಕ್ಷ, ಸರಕಾರದ ಮುಖ್ಯ ಸಚೇತಕರಾಗಿ ಸೇವೆ ಸಲ್ಲಿಸಿದ್ದ, ಕೆ. ವಸಂತ ಬಂಗೇರ (79ವ) ಅವರು ಅಲ್ಪಕಾಲದ ಅಸೌಖ್ಯದಿಂದ ಬಳಲಿ ಮೇ 8 ರಂದು ಸಂಜೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.




ಕುವೆಟ್ಟು ಗ್ರಾಮದವರು. ಕೇದೆ ಸುಬ್ಬ ಪೂಜಾರಿ ಮತ್ತು ದೇವಕಿ ದಂಪತಿಯ ಪುತ್ರರಾಗಿರುವ ಬಂಗೇರರು 15 ಜನವರಿ 1946ರಂದು ಜನಿಸಿದ್ದರು. ವಸಂತ ಬಂಗೇರ ಅವರು ಬೆಳ್ತಂಗಡಿಯ ಬೋರ್ಡ್ ಹೈಸ್ಕೂಲ್‌ನಲ್ಲಿ ಎಸ್. ಎಸ್. ಎಲ್. ಸಿ. ಯನ್ನು ಮಾಡಿದರು. ಮುಲ್ಕಿ ಮತ್ತು ಉಜಿರೆಯ ಎಸ್. ಡಿ.ಎಂ. ಕಾಲೇಜುಗಳಲ್ಲಿ ವ್ಯಾಸಂಗವನ್ನು ಮಾಡಿ 1962 ರಲ್ಲಿ ಪಿ.ಯು.ಸಿ ವ್ಯಾಸಂಗ ಮಾಡಿದರು. 1972 ರಲ್ಲಿ ಕುವೆಟ್ಟು ಗ್ರಾಮ ಪಂಚಾಯತ್‌ನ ಚುನಾವಣೆಯಲ್ಲಿ ಅವಿರೋಧವಾಗಿ ಸದಸ್ಯರಾಗಿ ಆಯ್ಕೆಯಾಗಿ ನಂತರ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.1983 ರಲ್ಲಿ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಚುನಾಯಿತರಾಗಿ ಪ್ರಥಮ ಬಾರಿಗೆ ವಿಧಾನ ಸಭೆಯನ್ನು ಪ್ರವೇಶಿಸಿದ್ದರು.


1985ರಲ್ಲಿ ಮತ್ತೆ ಭಾಜಪ ಬೆಂಬಲದಿಂದ ಸ್ಪರ್ಧಿಸಿ ಶಾಸಕರಾದರು. 1989ರಲ್ಲಿ ಬಿಜೆಪಿಯನ್ನು ತೊರೆದು ಜತ್ಯಾತೀತ ಜನತಾದಳಕ್ಕೆ ಸೇರ್ಪಡೆಗೊಂಡು ಸ್ಪರ್ಧಿಸಿ, ಸೋತ್ತಿದ್ದರು.1994ರಲ್ಲಿ ಜಾತ್ಯಾತೀತ ಜನತಾದಳದಿಂದ ಸ್ಪರ್ಧಿಸಿದ್ದ ಕೆ. ವಸಂತ ಬಂಗೇರ ಮೂರನೇ ಬಾರಿಗೆ ಶಾಸಕರಾಗಿ ಆಯ್ಕೆಯಾದರು. ಈ ಅವಧಿಯಲ್ಲಿ ಬಂಗೇರರು ವಿಧಾನ ಸಭೆಯ ಮುಖ್ಯ ಸಚೇತಕರಾಗಿ ಸೇವೆ ಸಲ್ಲಿಸಿದ್ದರು. 1999ರಲ್ಲಿ ಮತ್ತು 2004ರಲ್ಲಿ ಜೆಡಿಎಸ್‌ನಿಂದ ಸ್ಪರ್ಧಿಸಿದ್ದ ಬಂಗೇರರು ಸೋಲು ಅನುಭವಿಸಿದ್ದರು. ೨೦೦೮ರ ವಿಧಾನ ಸಭಾ ಚುನಾವಣೆಯಲ್ಲಿ ಬಂಗೇರರು ಜೆಡಿಎಸ್ ತೊರೆದು, ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡು ಕಾಂಗ್ರೆಸ್ ಬೆಂಬಲದಲ್ಲಿ ಸ್ಪರ್ಧಿಸಿ ನಾಲ್ಕನೇ ಅವಧಿಗೆ ಶಾಸಕರಾಗಿ ಚುನಾಯಿತರಾಗುವಲ್ಲಿ ಯಶಸ್ವಿಯಾದರು. 2013ರಲ್ಲಿ ನಡೆದ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತರಾದ ಮತ್ತೆ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಈ ಅವಧಿಯಲ್ಲಿ ಸಿದ್ಧರಾಮಯ್ಯ ಅವರ ಸರಕಾರವು ವಸಂತ ಬಂಗೇರ ಅವರನ್ನು ಸಣ್ಣ ಕೈಗಾರಿಕಾ ನಿಗಮದ ಅಧ್ಯಕ್ಷರಾಗಿ ನೇಮಿಸಿತ್ತು. 2018 ರಲ್ಲಿ ನಡೆದ ವಿಧಾನ ಸಭಾ ಚುನಾವಣೆಯಲ್ಲಿ ಮತ್ತೆ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಸೋಲು ಅನುಭವಿಸಿದರು.



ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಎಂಟು ಬಾರಿ ಸ್ಪರ್ಧಿಸಿ ಐದು ಬಾರಿ ಶಾಸಕರಾಗಿ, ಸರಕಾರದ ಮುಖ್ಯ ಸಚೇತಕರಾಗಿ ಸೇವೆಸಲ್ಲಿಸಿದ್ದ ಬಂಗೇರರು, ಶ್ರೀ ಗುರುನಾರಾಯಣ ಸೇವಾ ಸಂಘದ ಗೌರವಾಧ್ಯಕ್ಷರಾಗಿ, ಗುರುದೇವ ಕಾಲೇಜಿನ ಅಧ್ಯಕ್ಷರಾಗಿ, ಗುರುದೇವ ಸಹಕಾರಿ ಸಂಘದ ಸ್ಥಾಪಕರಲ್ಲಿ ಓರ್ವರಾಗಿ ಕೊಡುಗೈ ದಾನಿಯಾಗಿಯಾಗಿದ್ದರು. ಮೃತರು ಪತ್ನಿ ಸುಜಿತಾ ವಿ. ಬಂಗೇರ ಹಾಗೂ ಇಬ್ಬರು ಪುತ್ರಿಯರು, ಬಂದು ವರ್ಗದವರನ್ನು ಅಗಲಿದ್ದಾರೆ.


ಮುಂಜಾನೆ ಪಾರ್ಥಿವ ಶರೀರ ಬೆಳ್ತಂಗಡಿಗೆ ಆಗಮಿಸುವ ನಿರೀಕ್ಷೆ ಇದೆ. ನಂತರ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ

Thursday, 1 February 2024

ಖ್ಯಾತ ಹುಲಿವೇಷಧಾರಿ ಅಶೋಕ್ ರಾಜ್ ಕಾಡಬೆಟ್ಟು ಇನ್ನಿಲ್ಲ.


ಉಡುಪಿ: ಖ್ಯಾತ ಹುಲಿವೇಷಧಾರಿ ಅಶೋಕ್ ರಾಜ್ ಕಾಡಬೆಟ್ಟು ಅವರು ಗುರುವಾರ ಸಂಜೆ ಉಡುಪಿಯ ಖಾಸಗಿ ನಿಧನ ಹೊಂದಿದ್ದಾರೆ. ಅವರಿಗೆ 56 ವರ್ಷ ವಯಸ್ಸಾಗಿತ್ತು.

ಕಳೆದ ನವರಾತ್ರಿ ಸಮಯದಲ್ಲಿ ಬೆಂಗಳೂರಿನಲ್ಲಿ ನಡೆದ ಹುಲಿವೇಷ ಕಾರ್ಯಕ್ರಮದಲ್ಲೇ ಕುಸಿದು ಬಿದ್ದಿದ್ದ ಅವರನ್ನು ಬೆಂಗಳೂರಿನಲ್ಲಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿಗೆ ಕರೆತಂದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಸಂಜೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಅವರ ಸಹೋದರ ಹುಲಿ ವೇಷಧಾರಿ ಕಲಾವಿದ ಕಿಶೋರ್ ರಾಜ್ ಕಾಡಬೆಟ್ಟು ತಿಳಿಸಿದ್ದಾರೆ.

ನೂರಾರು ಮಂದಿಗೆ ಹುಲಿವೇಷ ತರಬೇತಿ ನೀಡುತ್ತಿದ್ದ ಅಶೋಕ್ ರಾಜ್ ಕಾಡಬೆಟ್ಟು ಕರಾವಳಿಯೆಲ್ಲೆಡೆ ಜನಪ್ರಿಯರಾಗಿದ್ದರು.

Wednesday, 24 January 2024

ಚುನಾವಣೆ ನಂತರ ರಾಹುಲ್ ಗಾಂಧಿಯವರನ್ನು ಬಂಧಿಸಲಾಗುವುದು: ಅಸ್ಸಾಂ ಸಿಎಂ


ಸಿಬ್ಸಾಗರ್: ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಆರೋಪದ ಮೇಲೆ ಎಫ್‌ಐಆರ್ ದಾಖಲಾಗಿರುವ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಲೋಕಸಭೆ ಚುನಾವಣೆ ನಂತರ ಬಂಧಿಸಲಾಗುವುದು ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮ ಬುಧವಾರ ಹೇಳಿದ್ದಾರೆ.

ಮಂಗಳವಾರ ನಡೆದ ಕಾಂಗ್ರೆಸ್ ಪಕ್ಷದ ‘ಭಾರತ್ ಜೋಡೋ ನ್ಯಾಯ್ ಯಾತ್ರೆ’ ವೇಳೆ ಅಸ್ಸಾಂ ಪೊಲೀಸರು ಸ್ವಯಂ ಪ್ರೇರಿತವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಇತರ ಹಲವು ನಾಯಕರ ವಿರುದ್ಧ “ಉದ್ದೇಶಪೂರ್ವಕ ಹಿಂಸಾಚಾರದ ಕೃತ್ಯಗಳ” ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.

“ನಾವು ಎಫ್‌ಐಆರ್ ದಾಖಲಿಸಿದ್ದೇವೆ. ವಿಶೇಷ ತನಿಖಾ ತಂಡ (ಎಸ್‌ಐಟಿ) ತನಿಖೆ ನಡೆಸಲಿದೆ ಮತ್ತು ಲೋಕಸಭೆ ಚುನಾವಣೆಯ ನಂತರ ರಾಹುಲ್ ಗಾಂಧಿಯವರನ್ನು ಬಂಧಿಸಲಾಗುವುದು ”ಎಂದು ಸಿಬ್ಸಾಗರ್ ಜಿಲ್ಲೆಯ ನಜೀರಾದಲ್ಲಿ ನಡೆದ ಕಾರ್ಯಕ್ರಮದ ಬಳಿಕ ಶರ್ಮಾ ಸುದ್ದಿಗಾರರಿಗೆ ಹೇಳಿಕೆ ನೀಡಿದ್ದಾರೆ.

”ಎಸ್‌ಐಟಿ ಮೂಲಕ ಸಮಗ್ರ ತನಿಖೆಗಾಗಿ ಪ್ರಕರಣವನ್ನು ಅಸ್ಸಾಂ ಸಿಐಡಿಗೆ ವರ್ಗಾಯಿಸಲಾಗಿದೆ” ಎಂದು ಪೊಲೀಸ್ ಮಹಾನಿರ್ದೇಶಕ ಜಿ.ಪಿ. ಸಿಂಗ್ ಹೇಳಿದ್ದಾರೆ.

ಅಸ್ಸಾಂ ನಲ್ಲಿ ನಡೆಯುತ್ತಿರುವ ಯಾತ್ರೆ ವೇಳೆ ಆಕ್ರೋಶ ಹೊರ ಹಾಕಿರುವ ರಾಹುಲ್ ಗಾಂಧಿ, ”ಹಿಮಂತ ಬಿಸ್ವಾ ಶರ್ಮಾ ದೇಶದ ಅತ್ಯಂತ ಭ್ರಷ್ಟ ಮುಖ್ಯಮಂತ್ರಿಯಾಗಿದ್ದು, ಅವರ ನಿಯಂತ್ರಕ ದೆಹಲಿಯಲ್ಲಿ ಕುಳಿತಿದ್ದಾರೆ. ಶರ್ಮಾ ಅವರಿಗೆ ರಾಹುಲ್ ಗಾಂಧಿಯನ್ನು ಹೆದರಿಸಬಹುದು ಎಂಬ ಕಲ್ಪನೆ ಎಲ್ಲಿಂದ ಬಂತು ಎಂದು ತಿಳಿದಿಲ್ಲ.ನನ್ನ ಮೇಲೆ ಎಷ್ಟು ಬೇಕೋ ಅಷ್ಟು ಕೇಸ್ ಹಾಕಲಿ ನನಗೆ ಭಯವಿಲ್ಲ ಎಂದು ತಿರುಗೇಟು ನೀಡಿದ್ದಾರೆ

Friday, 19 January 2024

ಗೋಕರ್ಣದಲ್ಲಿ ಪ್ರಭು ಶ್ರೀ ರಾಮ ತಪಸ್ಸು: ಬ್ರಹ್ಮ ಹತ್ಯೆ ದೋಷ ನಿವಾರಣೆಗೆ ರಾಮತೀರ್ಥ ದೇವಸ್ಥಾನ ಸ್ಥಾಪನೆ


ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಗೆ ಕ್ಷಣಗಣನೆ ಪ್ರಾರಂಭವಾಗಿದೆ. ಇತ್ತ ಪುರಾಣ ಪ್ರಸಿದ್ಧ ಗೋಕರ್ಣದಲ್ಲಿ ಶ್ರೀ ರಾಮ ಬ್ರಹ್ಮ ಹತ್ಯೆ ದೋಷ ನಿವಾರಣೆಗೆ ತಪಸ್ಸು ನಡೆಸಿದ ರಾಮ ತೀರ್ಥದಲ್ಲಿ ದೇವಸ್ಥಾನ ಜೀರ್ಣೋದ್ಧಾರದ ಜೊತೆ ಜೊತೆಗೆ ವಿಶೇಷ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. 

ಸುಂದರ ಶಾಂತತೆಯ ಪರಿಸರ ಹೊಂದಿರುವ ಈ ರಾಮತೀರ್ಥ ಕ್ಷೇತ್ರ ಹೆಚ್ಚು ಪ್ರಚಲಿತವಿಲ್ಲ.

ಇನ್ನು ಬ್ರಾಹ್ಮಣನಾದ ರಾವಣನನ್ನು ರಾಮ ವಧಿಸಿದ ನಂತರ ಬ್ರಹ್ಮ ಹತ್ಯೆ ದೋಷ ನಿವಾರಣೆಗಾಗಿ ಇಲ್ಲಿಗೆ ಬಂದು ತಪಸ್ಸು ಆಚರಿಸಿದ ಎಂಬ ಪ್ರತೀತಿ ಇದೆ. ಈ ಪುಷ್ಕರಣಿಯನ್ನು ರಾಮ ತನ್ನ ಬಾಣದಿಂದ ಸೃಷ್ಟಿಸಿದ ಎಂಬ ಪುರಾಣ ಕಥೆ ಇದ್ದು ಸರ್ವ ಋತುವಿನಲ್ಲೂ ಸ್ಫಟಿಕದಂತೆ ಶುದ್ಧವಾಗಿ ಹರಿಯುತ್ತದೆ.

ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಇದ್ದು ಈ ವೇಳೆ ಈ ಪುರಾತನ ರಾಮಮಂದಿರದಲ್ಲಿ ವಿಶೇಷ ಪೂಜೆ ರಾಮ ಮೂರ್ತಿಯ ಪಲ್ಲಕ್ಕಿ ಉತ್ಸವ, ದೀಪೋತ್ಸವ ಸೇರಿದಂತೆ ಅನೇಕ ವಿಶೇಷ ಧಾರ್ಮಿಕ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.

Wednesday, 10 January 2024

Yuva Nidhi Scheme; ನಾಳೆ ಶಿವಮೊಗ್ಗದಲ್ಲಿ ಚಾಲನೆ.

 


ಯುವನಿಧಿ ಯೋಜನೆಯಡಿ 2023ನೇ ಸಾಲಿನಲ್ಲಿ ಪದವೀಧರರಿಗೆ ಮತ್ತು ಡಿಪ್ಲೊಮಾ ಉತ್ತೀರ್ಣರಾಗಿ ಉದ್ಯೋಗ ದೊರಕದ ಅಭ್ಯರ್ಥಿಗಳಿಗೆ ಪದವಿ ಅಭ್ಯರ್ಥಿಗಳಿಗೆ ಮಾಸಿಕ 3 ಸಾವಿರ ರೂ. ಹಾಗೂ ಡಿಪ್ಲೊಮಾ ಅಭ್ಯರ್ಥಿಗಳಿಗೆ ಮಾಸಿಕ 1,500 ರೂ. ನಿರುದ್ಯೋಗ ಭತ್ತೆಯನ್ನು ನೀಡಲಾಗುತ್ತದೆ.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೋಂದಣಿಗೆ ಉತ್ತಮ ಪ್ರತಿಕ್ರಿಯೆ ದೊರಕಿದ್ದು, ಈಗಾಗಲೇ 1,700ಕ್ಕೂ ಹೆಚ್ಚಿನ ಯುವಕ ಯುವತಿಯರು ಈ ಯೋಜನೆಯಡಿ ನೋಂದಾಯಿಸಿಕೊಂಡಿದ್ದಾರೆ.ಜ. 12ರಂದು ಸ್ವಾಮಿ ವಿವೇಕಾನಂದ ಜಯಂತಿಯ ಪ್ರಯುಕ ¤ರಾಷ್ಟ್ರೀಯ ಯುವ ದಿನದಂದು ಶಿವಮೊಗ್ಗ ಫ್ರೀಡಂ ಪಾರ್ಕ್‌ನಲ್ಲಿ ಮುಖ್ಯಮಂತ್ರಿಗಳ ಉಪಸ್ಥಿತಿಯಲ್ಲಿ ಯುವ ನಿಧಿ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆ ಕಾರ್ಯಕ್ರಮ ನಡೆಯಲಿದೆ. ಜಿಲ್ಲೆಯಲ್ಲಿ ಈ ಯೋಜನೆಯಡಿ ನೋಂದಾಯಿಸಿರುವ ಅಭ್ಯರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಜಿಲ್ಲಾ ಉದ್ಯೋಗಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Tuesday, 9 January 2024

ಸರ್ಕಾರಿ ಬಂಗಲೆ ಖಾಲಿ ಮಾಡದ ಮಾಜಿ ಸಂಸದೆ ಮಹುವಾ ಮೊಯಿತ್ರಾಗೆ ನೋಟಿಸ್ ಜಾರಿ


ಸರ್ಕಾರಿ ಬಂಗಲೆಯನ್ನು ತೆರವು ಮಾಡದಿದ್ದಕ್ಕಾಗಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮಾಜಿ ಸಂಸದೆ ಮಹುವಾ ಮೊಯಿತ್ರಾ ಅವರಿಗೆ ಎಸ್ಟೇಟ್ ನಿರ್ದೇಶನಾಲಯ (ಡಿಒಇ) ಸೋಮವಾರ ಶೋಕಾಸ್ ನೋಟಿಸ್ ನೀಡಿದೆ. ನಗರ ವಸತಿ ಮತ್ತು ನಗರಾಭಿವೃದ್ಧಿ ಸಚಿವಾಲಯದ ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಪಿಟಿಐ ಈ ಮಾಹಿತಿಯನ್ನು ನೀಡಿದೆ.ಕಳೆದ ವರ್ಷ ಡಿಸೆಂಬರ್ 8 ರಂದು ತೃಣಮೂಲ ಕಾಂಗ್ರೆಸ್ ಸಂಸದೆ ಮೊಯಿತ್ರಾ ಅವರನ್ನು ಲೋಕಸಭೆಯಿಂದ ಉಚ್ಚಾಟಿಸಲಾಗಿತ್ತು. ಅವರ ಖಾತೆಯನ್ನು ರದ್ದುಗೊಳಿಸಿದ್ದರಿಂದ ಜನವರಿ 7 ರೊಳಗೆ ಬಂಗಲೆಯನ್ನು ಖಾಲಿ ಮಾಡುವಂತೆ ತಿಳಿಸಲಾಯಿತು. ಆದರೆ ಇದುವರೆಗೂ ಬಂಗಲೆ ಖಾಲಿ ಮಾಡದ ಕಾರಣ ಶೋಕಾಸ್ ನೋಟಿಸ್‌ ನೀಡಿದ್ದು 3 ದಿನಗಳಲ್ಲಿ ಉತ್ತರಿಸುವಂತೆ ಎಸ್ಟೇಟ್ ನಿರ್ದೇಶನಾಲಯ ಕೇಳಿದೆ.ಮೊಯಿತ್ರಾ ಅವರಿಗೆ ನೀಡಲಾದ ಶೋಕಾಸ್ ನೊಟೀಸ್ ನಲ್ಲಿ ಸರ್ಕಾರಿ ಬಂಗಲೆಯನ್ನು ಏಕೆ ಇನ್ನೂ ತೆರವು ಮಾಡಿಲ್ಲ ಎಂದು ಕೇಳಲಾಗಿದ್ದು ಇದಕ್ಕೆ ಉತ್ತರ ನೀಡುವಂತೆ ಕೇಳಿದೆ.

ಬೆಂಗಳೂರು – ಮಂಗಳೂರು ಬಸ್ಸು ತಡೆದು ಮಾರಕಾಸ್ತ್ರದಿಂದ ಹಲ್ಲೆ- ಪುಡಿ ರೌಡಿಯ ಕಾಲಿಗೆ ಗುಂಡೇಟು, ಅರೆಸ್ಟ್‌

 ಹಾಸನ: ಬೆಂಗಳೂರಿನಿಂದ ಮಂಗಳೂರಿಗೆ  ತೆರಳುತ್ತಿದ್ದ ಖಾಸಗಿ ಬಸ್ ತಡೆದು ಲಾಂಗ್‌ನಿಂದ ಹಲ್ಲೆ ಮಾಡಿ ಅಟ್ಟಹಾಸ ಮೆರೆದಿದ್ದ ಪುಡಿರೌಡಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘ...