ಪ್ರಧಾನಿ ನರೇಂದ್ರ ಮೋದಿಯವರ ಇತ್ತೀಚಿನ ಲಕ್ಷದ್ವೀಪ ಪ್ರವಾಸದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ಹೇಳಿಕೆಗಳನ್ನು ಹಂಚಿಕೊಂಡ ನಂತರ ಮಾಲ್ಡೀವ್ಸ್ ಸರಕಾರ ತನ್ನ ಮೂವರು ಸಚಿವರನ್ನು ಭಾನುವಾರ ಅಮಾನತುಗೊಳಿಸಿದೆ.ಭಾರತವು ದ್ವೀಪ ರಾಷ್ಟ್ರ ದೊಂದಿಗೆ ಈ ಗಂಭೀರ ವಿಚಾರವನ್ನು ಪ್ರಸ್ತಾಪಿಸಿದ ನಂತರ ಸಚಿವರಾದ ಮಲ್ಶಾ ಶರೀಫ್, ಮರಿಯಮ್ ಶಿಯುನಾ ಮತ್ತು ಅಬ್ದುಲ್ಲಾ ಮಹಜೂಮ್ ಮಜೀದ್ ಅವರನ್ನು ತಮ್ಮ ಸ್ಥಾನಗಳಿಂದ ಅಮಾನತುಗೊಳಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಮಾಲ್ಡೀವ್ಸ್ ವಕ್ತಾರರು ತಿಳಿಸಿದ್ದಾರೆ.ಗಮನಾರ್ಹ ವಿಚಾರವೆಂದರೆ , ಪ್ರಧಾನಿ ಮೋದಿ ಲಕ್ಷದ್ವೀಪ ಭೇಟಿಯ ಚಿತ್ರಗಳನ್ನು ಪೋಸ್ಟ್ ಮಾಡಿದ ನಂತರ ಮತ್ತು ಭಾರತೀಯರಿಗೆ ಪ್ರವಾಸಿ ತಾಣವಾಗಿ ದ್ವೀಪವನ್ನು ಪ್ರವಾಸಿ ತಾಣವಾಗಿ ಬೆಳೆಸಬೇಕೆಂದು ಕರೆ ನೀಡಿದ ಬಳಿಕ, ಪ್ರಧಾನಿ ಮೋದಿಯವನ್ನು ವಿದೂಷಕ ಮತ್ತು ಗೊಂಬೆ ಎಂದು ಕರೆದಿದ್ದರು. ಸದ್ಯ ಸಚಿವರುಗಳು ಮಾಡಿದ ಎಕ್ಸ್ ಪೋಸ್ಟ್ ಗಳನ್ನು ಅಳಿಸಲಾಗಿದೆ.
Monday, 8 January 2024
PM Modi ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಮಾಲ್ಡೀವ್ಸ್ 3 ಸಚಿವರ ಅಮಾನತು!
ಪ್ರಧಾನಿ ನರೇಂದ್ರ ಮೋದಿಯವರ ಇತ್ತೀಚಿನ ಲಕ್ಷದ್ವೀಪ ಪ್ರವಾಸದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ಹೇಳಿಕೆಗಳನ್ನು ಹಂಚಿಕೊಂಡ ನಂತರ ಮಾಲ್ಡೀವ್ಸ್ ಸರಕಾರ ತನ್ನ ಮೂವರು ಸಚಿವರನ್ನು ಭಾನುವಾರ ಅಮಾನತುಗೊಳಿಸಿದೆ.ಭಾರತವು ದ್ವೀಪ ರಾಷ್ಟ್ರ ದೊಂದಿಗೆ ಈ ಗಂಭೀರ ವಿಚಾರವನ್ನು ಪ್ರಸ್ತಾಪಿಸಿದ ನಂತರ ಸಚಿವರಾದ ಮಲ್ಶಾ ಶರೀಫ್, ಮರಿಯಮ್ ಶಿಯುನಾ ಮತ್ತು ಅಬ್ದುಲ್ಲಾ ಮಹಜೂಮ್ ಮಜೀದ್ ಅವರನ್ನು ತಮ್ಮ ಸ್ಥಾನಗಳಿಂದ ಅಮಾನತುಗೊಳಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಮಾಲ್ಡೀವ್ಸ್ ವಕ್ತಾರರು ತಿಳಿಸಿದ್ದಾರೆ.ಗಮನಾರ್ಹ ವಿಚಾರವೆಂದರೆ , ಪ್ರಧಾನಿ ಮೋದಿ ಲಕ್ಷದ್ವೀಪ ಭೇಟಿಯ ಚಿತ್ರಗಳನ್ನು ಪೋಸ್ಟ್ ಮಾಡಿದ ನಂತರ ಮತ್ತು ಭಾರತೀಯರಿಗೆ ಪ್ರವಾಸಿ ತಾಣವಾಗಿ ದ್ವೀಪವನ್ನು ಪ್ರವಾಸಿ ತಾಣವಾಗಿ ಬೆಳೆಸಬೇಕೆಂದು ಕರೆ ನೀಡಿದ ಬಳಿಕ, ಪ್ರಧಾನಿ ಮೋದಿಯವನ್ನು ವಿದೂಷಕ ಮತ್ತು ಗೊಂಬೆ ಎಂದು ಕರೆದಿದ್ದರು. ಸದ್ಯ ಸಚಿವರುಗಳು ಮಾಡಿದ ಎಕ್ಸ್ ಪೋಸ್ಟ್ ಗಳನ್ನು ಅಳಿಸಲಾಗಿದೆ.
Sunday, 7 January 2024
ಡಿಕೆಶಿ, ಫೇಸ್‌ಬುಕ್ ಖಾತೆ ನಿರ್ವಾಹಕರ ವಿರುದ್ಧ ದೂರು.
ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಮತ್ತು ಸಿ.ಟಿ.ರವಿ, ಸುನೀಲ್ ಕುಮಾರ್ ಹಾಗೂ ಸಂಸದ ಪ್ರತಾಪ್ ಸಿಂಹ ಅವರ ಫೋಟೋಗಳನ್ನು ದುರ್ಬಳಕೆ ಮಾಡಿಕೊಂಡು, ಅವರ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ ಆರೋಪದಡಿ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿಯೂ ಆದ ಡಿ. ಕೆ.ಶಿವಕುಮಾರ್ ಮತ್ತು ಅವರ ಫೇಸ್‌ಬುಕ್ ಖಾತೆಯ ನಿರ್ವಾಹಕರ ವಿರುದ್ಧ ಬಿಜೆಪಿ ಕಾನೂನು ಘಟಕದ ರಾಜ್ಯ ಸಂಚಾಲಕ ಯೋಗೇಂದ್ರ ಹೂಡಘಟ್ಟ ಎಂಬವರು ಹೈಗ್ರೌಂಡ್ಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.ಕಾಂಗ್ರೆಸ್‌ನ ಅಧಿಕೃತ ಫೇಸ್‌ಬುಕ್ ಖಾತೆಯಲ್ಲಿ ಬಿಜೆಪಿಯ ಹಿರಿಯ ನಾಯಕರ ಮಾರ್ಫ್ ಮಾಡಿದ ಫೋಟೋಗಳನ್ನು ಬಳಸಿ ತಿರುಚಿದ ಹಾಗೂ ದಾರಿತಪ್ಪಿಸುವ ಸುಳ್ಳು ಪೋಸ್ಟ್‌ಗಳನ್ನು ಹಾಕಲಾಗಿದೆ. ಈ ಮೂಲಕ ಉದ್ದೇಶಪೂರ್ವಕವಾಗಿ ರಾಜ್ಯದ ಜನರಲ್ಲಿ ದ್ವೇಷ ಹುಟ್ಟಿಸಲು ಹಾಗೂ ಬಿಜೆಪಿ ನಾಯಕರ ಹೆಸರಿಗೆ ಮಸಿ ಬಳಿಯಲು ಯತ್ನಿಸಲಾಗಿದೆ. ಈ ರೀತಿಯ ಫೋಸ್ಟ್‌ಗಳು ಬಿಜೆಪಿ ವಿರುದ್ಧ ಕನ್ನಡಿಗರನ್ನು ಎತ್ತಿಕಟ್ಟುವ ಮತ್ತು ಶಾಂತಿಗೆ ಭಂಗ ತರುವ ಉದ್ದೇಶ ಹೊಂದಿದೆ. ಇದು ಕೆಲ ವರ್ಗದ ಜನರನ್ನು ಉದ್ವಿಘ್ನಗೊಳಿಸುತ್ತದೆ. ಈ ರೀತಿ ಗೊಂದಲ ಉಂಟುಮಾಡುತ್ತಿರುವ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಅವರ ಫೇಸ್‌ಬುಕ್ ಪೇಜ್ ನಿರ್ವಹಿಸುವ ವ್ಯಕ್ತಿಗಳಿಗೆ ಗೊತ್ತಿದ್ದರೂ, ನಿರಂತರವಾಗಿ ಆರೋಪ ಮಾಡುತ್ತಿದ್ದಾರೆ. ಆದರಿಂದ ಶಿವಕುಮಾರ್ ಹಾಗೂ ಅವರ ಫೇಸ್‌ಬುಕ್ ಪೇಜ್ ನಿರ್ವಹಿಸುವ ವ್ಯಕ್ತಿಗಳ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಯೋಗೇಂದ್ರ ಹೂಡಘಟ್ಟ ದೂರಿನಲ್ಲಿ ಆರೋಪಿಸಿದ್ದಾರೆ.
Friday, 5 January 2024
ಬೆಂಗಳೂರು: ರಾಷ್ಟ್ರೀಯ ಷೇರು ವಿನಿಮಯ ಕೇಂದ್ರಕ್ಕೆ ಬಾಂಬ್ ಬೆದರಿಕೆ ಕರೆ.

ಬೆಂಗಳೂರಿನಲ್ಲಿ ಮೇಲಿಂದ ಮೇಲೆ ಹುಸಿ ಬಾಂಬ್ ಬೆದರಿಕೆ ಕರೆಗಳು ಬರುತ್ತಿವೆ. ನಿನ್ನೆ (ಜ.06) ವಿಶ್ವೇಶ್ವರಯ್ಯ ಮುಸ್ಯಿಯಂಗೆ ಬಾಂಬ್ ಬೆದರಿಕೆ ಮೇಲ್ ಬಂದಿತ್ತು. ಇದಾದ ಬೆನ್ನಲ್ಲೇ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ರಾಷ್ಟ್ರೀಯ ಷೇರು ವಿನಿಮಯ ಕೇಂದ್ರಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದೆ.ಆರೋಪಿಗಳು ಜನವರಿ 3ರಂದು ಮುಂಬೈನ ರಾಷ್ಟ್ರೀಯ ಷೇರು ವಿನಿಮಯ ಕೇಂದ್ರ ಕಚೇರಿಗೆ ಕರೆ ಮಾಡಿ, ಬೆಂಗಳೂರಿನ ಕಚೇರಿಯಲ್ಲಿ ಬಾಂಬ್ ಇಡಲಾಗಿದೆ ಎಂದು ಹೇಳಿದ್ದಾರೆ.ಕೂಡಲೇ ಮುಂಬೈನ ಎನ್ಎಸ್ಇ ಕಚೇರಿ ಅಧಿಕಾರಿಗಳು ಮಧ್ಯರಾತ್ರಿ ಒಂದು ಗಂಟೆಗೆ ಸುಮಾರಿಗೆ ವಿಧಾನಸೌಧ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದರು. ತಕ್ಷಣ ಪೊಲೀಸರು ಬಾಂಬ್ ನಿಷ್ಕ್ರಿಯ ದಳದೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪರಿಶೀಲನೆ ವೇಳೆ ಯಾವುದೇ ಸ್ಪೋಟಕವಸ್ತು ಪತ್ತೆಯಾಗಿಲ್ಲ. ಸದ್ಯ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Wednesday, 3 January 2024
ಪುತ್ತೂರು ಕೊಠಡಿಯಲ್ಲಿ ಕೂಡಿ ಹಾಕಿದ್ದ ವಿವಾಹಿತ ಮಹಿಳೆಯ ರಕ್ಷಣೆ
ಅನಾರೋಗ್ಯದ ನೆಪವೊಡ್ಡಿ ಮೂರು ತಿಂಗಳಿನಿಂದ ವಿವಾಹಿತ ಮಹಿಳೆಯನ್ನು ಕನಿಷ್ಠ ಸೌಲಭ್ಯವೂ ಇಲ್ಲದ ಕೊಠಡಿಯಲ್ಲಿ ಕೂಡಿ ಹಾಕಿದ ಮಾಹಿತಿ ಪಡೆದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮತ್ತು ಆರೋಗ್ಯ ಇಲಾಖೆಯು ಪೊಲೀಸರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಅವರನ್ನು ರಕ್ಷಿಸಿ ಚಿಕಿತ್ಸೆಗಾಗಿ ಪುತ್ತೂರಿನ ಸರಕಾರಿ ಆಸ್ಪತ್ರೆಗೆ ದಾಖಲಿಸಿದ ಘಟನೆ ಕೆಮ್ಮಿಂಜೆ ಗ್ರಾಮದ ಇಡಬೆಟ್ಟು ಸಮೀಪದ ಕರೆಜ್ಜದಲ್ಲಿ ನಡೆದಿದೆ.ಶ್ರೀಪತಿ ಹೆಬ್ಬಾರ್ ಅವರ ಪತ್ನಿ ಆಶಾಲತಾ ದಿಗ್ಬಂಧನಕ್ಕೆ ಒಳಗಾಗಿದ್ದ ಮಹಿಳೆ. ಮನೆ ಪಕ್ಕದ ಸಿಮೆಂಟ್ ಶೀಟ್ ಅಳವಡಿಸಿದ ಕಿಟಕಿ, ವಿದ್ಯುತ್ ಬೆಳಕು ಇಲ್ಲದ ಒಂದೇ ಬಾಗಿಲಿನ ಕೋಣೆಯಲ್ಲಿ ದಿಗ್ಬಂಧನದಲ್ಲಿರಿಸಲಾಗಿತ್ತು. ಅನಾಮಧೇಯ ಕರೆಯ ಹಿನ್ನೆಲೆಯಲ್ಲಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ.ಆಶಾಲತಾ ಮೂಲತಃ ವಿಟ್ಲ ಸಮೀಪದವರು. ಕೆಲವು ವರ್ಷಗಳ ಹಿಂದೆ ಶ್ರೀಪತಿ ಆಕೆಯನ್ನು ಮದುವೆಯಾಗಿದ್ದರು. ಅಂತರ್ಜಾತಿ ವಿವಾಹ ಇದಾಗಿದ್ದು ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಆರಂಭದಲ್ಲಿ ಅನ್ಯೋನ್ಯವಾಗಿದ್ದರು ಎನ್ನಲಾಗಿದೆ. ಬಳಿಕ ಆಶಾ ಅವರ ಆರೋಗ್ಯ ಸರಿ ಇಲ್ಲ ಎಂಬ ಕಾರಣಕ್ಕಾಗಿ ಮನೆ ಸಮೀಪದ ಕೊಠಡಿಯೊಳಗೆ ಕೂಡಿ ಹಾಕಲಾಗಿತ್ತು ಎನ್ನುವ ಮಾಹಿತಿ ಲಭಿಸಿದೆ.ಗೋದಾಮು ಮಾದರಿಯ ಕೊಠಡಿಯೊಳಗೆ ದಿನ ಕಳೆಯುತ್ತಿದ್ದ ಆಶಾಲತಾಗೆ ಹೊರ ಜಗತ್ತಿನ ಸಂಪರ್ಕವೇ ಇರಲಿಲ್ಲ. ಬಾಗಿಲಿಗೆ ಬೀಗ ಜಡಿಯಲಾಗಿತ್ತು. ಮಲ-ಮೂತ್ರವೆಲ್ಲ ಕೊಠಡಿಯೊಳಗೇ ಆಗುತ್ತಿತ್ತು. ಚಾಪೆ ಕೂಡ ಇಲ್ಲದ ಕಾರಣ ನೆಲದಲ್ಲೇ ಮಲಗಬೇಕಿತ್ತು. ಕೊಠಡಿ ದುರ್ವಾಸನೆಯಿಂದ ಕೂಡಿತ್ತು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಮನೆಯವರು ದಿನಕ್ಕೆ ಒಂದು ಬಾರಿ ಬಿಸ್ಕೆಟ್, ಚಹಾ ಬಿಟ್ಟರೆ ಬೇರೇನೂ ಕೊಡುತ್ತಿರಲಿಲ್ಲ ಎನ್ನಲಾಗಿದೆ. ದೇಹ ಕ್ಷೀಣಿಸಿದ ಪರಿಣಾಮ ಬಿದ್ದುಕೊಂಡ ಸ್ಥಿತಿಯಲ್ಲಿದ್ದ ಆಶಾ ಅವರನ್ನು ಅಧಿಕಾರಿಗಳು ಕೊಠಡಿಯಿಂದ ಹೊರತಂದು ಸ್ನಾನ ಮಾಡಿಸಿ ಆಸ್ಪತ್ರೆಗೆ ದಾಖಲಿಸಿದರು.
ಉಡುಪಿಹಿರಿಯ ಬಿಜೆಪಿ ಮುಖಂಡ, ಹೋಟೇಲ್ ಉದ್ಯಮಿ ಬಿ.ಸುಧಾಕರ್ ಶೆಟ್ಟಿ ನಿಧನ
ಹಿರಿಯ ಬಿಜೆಪಿ ಮುಖಂಡ, ಶಾರದಾ ಇಂಟರ್ನ್ಯಾಷನಲ್ ಹೋಟೇಲ್ ಮಾಲೀಕ ಬಿ.ಸುಧಾಕರ್ ಶೆಟ್ಟಿ(72) ಇಂದು ಬೆಳಗ್ಗೆ ಉಡುಪಿಯ ಗಾಂಧಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.ಸುಧಾಕರ್ ಶೆಟ್ಟಿ ಹಲವು ವರ್ಷಗಳಿಂದ ಹೊಟೇಲ್ ಉದ್ಯಮ ನಡೆಸುತ್ತಿದ್ದರು. 2009ರಿಂದ 2012ರವರೆಗೆ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು, ಉಡುಪಿ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ 1999ರಲ್ಲಿ ಯು.ಆರ್.ಸಭಾಪತಿ ವಿರುದ್ಧ ಸೋಲು ಕಂಡಿದ್ದರು. 2004ರ ಚುನಾವಣೆಯಲ್ಲಿ ಟಿಕೆಟ್ ಬಿಜೆಪಿಯಿಂದ ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. 2013ರ ಚುನಾವಣೆಯಲ್ಲಿ ಹಾಲಿ ಶಾಸಕರಾಗಿದ್ದ ರಘುಪತಿ ಭಟ್ ಸಿಡಿ ವಿವಾದದಿಂದ ಸ್ಪರ್ಧಿಸಲು ಹಿಂದೆ ಸರಿದ ಹಿನ್ನೆಲೆಯಲ್ಲಿ ಸುಧಾಕರ್ ಶೆಟ್ಟಿ ಕಣಕ್ಕಿಳಿದಿದ್ದರು. ಆದರೆ ಅವರು ಪ್ರಮೋದ್ ಮಧ್ವರಾಜ್ ವಿರುದ್ಧ ಸೋಲು ಅನುಭವಿಸಿದ್ದರು. ಬಿಜೆಪಿ ಪಕ್ಷದಲ್ಲಿ ವಿವಿಧ ಹುದ್ದೆಗಳನ್ನು ಅವರು ಅಲಂಕರಿಸಿದ್ದರು
ವಿಪಕ್ಷಗಳ ಇಂಡಿಯಾ ಒಕ್ಕೂಟಕ್ಕೆ ನಿತೀಶ್ ಕುಮಾರ್ ಸಂಚಾಲಕ?
ವಿಪಕ್ಷ ಐಎನ್‌ಡಿಐಎ ಒಕ್ಕೂಟಕ್ಕೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಸಂಚಾಲಕರಾಗಿ ನೇಮಕವಾಗುವ ಸಾಧ್ಯತೆ ಇದೆ. ಒಕ್ಕೂಟದಲ್ಲಿ ಅಧ್ಯಕ್ಷ ಹಾಗೂ ಸಂಚಾಲಕ ಸ್ಥಾನ ಮಹತ್ವದ ಪಾತ್ರವಹಿ ಸಲಿದ್ದು, ಗುರುವಾರ ಝೂಮ್ ಮೂಲಕ ನಡೆಯ ಲಿರುವ ಒಕ್ಕೂಟದ ಸಭೆಯಲ್ಲಿ ನಿತೀಶ್ ಆಯ್ಕೆಯನ್ನು ಅಧಿಕೃತಗೊಳಿಸಲಾಗುವುದು ಎಂದು ಮೂಲಗಳು ತಿಳಿಸಿವೆ. ಜೆಡಿಯು ರಾಷ್ಟ್ರೀಯ ಅಧ್ಯಕ್ಷ ನಿತೀಶ್‌ರನ್ನು ಸಂಚಾಲಕರನ್ನಾಗಿ ನೇಮಿಸುವ ಸಂಬಂಧ ಆರ್‌ಜೆಡಿ ಮುಖ್ಯಸ್ಥ ಲಾಲು ಯಾದವ್ ಜತೆಗೂ ಕಾಂಗ್ರೆಸ್ ಮಾತುಕತೆ ನಡೆಸಿದೆ. ಇತರ ಪಾಲುದಾರ ಪಕ್ಷಗಳ ಜತೆಯೂ ಸಮಾಲೋಚಿಸಿ ನೇಮಕವನ್ನು ಅಂತಿಮಗೊಳಿಸಲಾಗುತ್ತದೆ. ಇನ್ನೊಂದೆಡೆ, ನಿತೀಶ್ ಅವರು ಶಿವಸೇನೆ (ಯುಬಿಟಿ) ಅಧ್ಯಕ್ಷ ಉದ್ಧವ್ ಠಾಕ್ರೆ ಜತೆ ಮಾತುಕತೆ ನಡೆಸಿದ್ದಾರೆ. ದಿಲ್ಲಿ ಮುಖ್ಯಮಂತ್ರಿ, ಆಪ್ ಮುಖ್ಯಸ್ಥ ಕೇಜ್ರಿವಾಲ್ ಕೂಡ ನಿತೀಶ್ ನೇಮಕಕ್ಕೆ ಸಹಮತ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ.ಇಂಡಿಯಾ ಒಕ್ಕೂಟದ ಸೀಟು ಹಂಚಿಕೆ ಪ್ರಕ್ರಿಯೆ ಶುರುವಾಗುವ ಮುನ್ನವೇ ಜೆಡಿಯು ಲೋಕಸಭೆ ಚುನಾವಣೆಗೆ ಅರುಣಾಚಲ ಪ್ರದೇಶದಲ್ಲಿ ಮೊದಲ ಅಭ್ಯರ್ಥಿಯನ್ನು ಘೋಷಿಸಿದೆ. ಪಕ್ಷದ ರಾಜ್ಯಾಧ್ಯಕ್ಷ ರುಹಿ ತಂಗುಂಗ್ ಅರುಣಾಚಲ ಪಶ್ಚಿಮ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ ಎಂದಿದೆ.
ಶ್ರೀಕಾಂತ್ ಪೂಜಾರಿ ಪರ ಕೋಮುದ್ವೇಷ ಸೃಷ್ಟಿಸುವ ಹೇಳಿಕೆ: ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಕಾಂಗ್ರೆಸ್ ದೂರು
Sauram News
ಬೆಂಗಳೂರು, ಜ.03: ಕೋಮುದ್ವೇಷ ಸೃಷ್ಟಿಸುವ ಹೇಳಿಕೆ ನೀಡಿದ್ದಾರೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಕಾಂಗ್ರೆಸ್ ದೂರು ನೀಡಿದೆ. ಶ್ರೀಕಾಂತ್ ಪೂಜಾರಿ ಪರ ಹೇಳಿಕೆ ನೀಡಿದ್ದ ಬಿ.ವೈ.ವಿಜಯೇಂದ್ರ ವಿರುದ್ದ ಇದೀಗ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್‌ಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮನೋಹರ್ ಎಂಬುವವರು ದೂರು ಸಲ್ಲಿಸಿದ್ದಾರೆ.ಶ್ರೀಕಾಂತ್ ಪೂಜಾರಿ ಬಂಧನ ಖಂಡಿಸಿ ನಿನ್ನೆ(ಜ.02) ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ‘ಶ್ರೀಕಾಂತ್ ಪೂಜಾರಿ ಅವರನ್ನು ಬಿಡುಗಡೆ ಮಾಡುವವರೆಗೂ ಬಿಜೆಪಿ ಸುಮ್ಮನಿರಲ್ಲ, ನಾಳೆ ಬೃಹತ್ ಹೋರಾಟ ಮೂಲಕ ಈ ಸರ್ಕಾರಕ್ಕೆ ತಕ್ಕ ಉತ್ತರ ಕೊಡುತ್ತೇವೆ. ಈ ಸರ್ಕಾರ ಹಿಂದೂ ಬಿಜೆಪಿ ಕಾರ್ಯಕರ್ತರನ್ನು ಬೆದರಿಸುವ ಕಲಸ ಮಾಡುತ್ತಿದೆ. ಇಂತಹ ಗೊಡ್ಡು ಬೆದರಿಕೆಗೆ ನಾವು ಹೆದರುವುದಿಲ್ಲ. ಇದು ಹಿಂದೂ ವಿರೋಧಿ, ರಾಮ ವಿರೋಧಿ ಸರ್ಕಾರ, ಇದು ಅಲ್ಪಸಂಖ್ಯಾತರ ಕಲ್ಯಾಣ ಮಾತ್ರ ಬಯಸುವ ಸರ್ಕಾರವಾಗಿದೆ. ಅಲ್ಪಸಂಖ್ಯಾತರನ್ನು ಖುಷಿ ಪಡಿಸಲು ಹಿಂದೂಗಳ ಬಂಧನ ಮಾಡಲಾಗಿದೆ ಎಂದಿದ್ದರು.
ಬೆಂಗಳೂರು – ಮಂಗಳೂರು ಬಸ್ಸು ತಡೆದು ಮಾರಕಾಸ್ತ್ರದಿಂದ ಹಲ್ಲೆ- ಪುಡಿ ರೌಡಿಯ ಕಾಲಿಗೆ ಗುಂಡೇಟು, ಅರೆಸ್ಟ್
ಹಾಸನ: ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ತಡೆದು ಲಾಂಗ್‌ನಿಂದ ಹಲ್ಲೆ ಮಾಡಿ ಅಟ್ಟಹಾಸ ಮೆರೆದಿದ್ದ ಪುಡಿರೌಡಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘ...
-
ಹಾಸನ: ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ತಡೆದು ಲಾಂಗ್‌ನಿಂದ ಹಲ್ಲೆ ಮಾಡಿ ಅಟ್ಟಹಾಸ ಮೆರೆದಿದ್ದ ಪುಡಿರೌಡಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘ...
-
ಕೇರಳಕ್ಕೆ ಭೇಟಿ ಕೊಟ್ಟ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಜನವರಿ 22ರಂದು ಅಯೋಧ್ಯೆಯಲ್ಲಿ ಅದ್ದೂರಿಯಾಗಿ ನಡೆಯಲಿರುವ ರಾಮಮಂದಿರದ ಶಂಕುಸ್ಥಾಪನೆ ಸಮಾರಂಭವನ್ನು ರಾಜ್ಯದ...
-
ಪುತ್ತೂರು ಸೆಪ್ಟೆಂಬರ್ 24: ಅಂಬ್ಯುಲೆನ್ಸ್ ಗೆ ಪಿಕಪ್ ವೊಂದು ಡಿಕ್ಕಿ ಹೊಡೆದ ಘಟನೆ ಘಟನೆ ಪುತ್ತೂರು ತಾಲೂಕಿನ ಮುರ ಎಂಬಲ್ಲಿ ಸೋಮವಾರ ತಡರಾತ್ರಿ ನಡೆದಿರುವ ಬಗ್ಗೆ ವರದ...





