ಉಡುಪಿ: ಖ್ಯಾತ ಹುಲಿವೇಷಧಾರಿ ಅಶೋಕ್ ರಾಜ್ ಕಾಡಬೆಟ್ಟು ಅವರು ಗುರುವಾರ ಸಂಜೆ ಉಡುಪಿಯ ಖಾಸಗಿ ನಿಧನ ಹೊಂದಿದ್ದಾರೆ. ಅವರಿಗೆ 56 ವರ್ಷ ವಯಸ್ಸಾಗಿತ್ತು.ಕಳೆದ ನವರಾತ್ರಿ ಸಮಯದಲ್ಲಿ ಬೆಂಗಳೂರಿನಲ್ಲಿ ನಡೆದ ಹುಲಿವೇಷ ಕಾರ್ಯಕ್ರಮದಲ್ಲೇ ಕುಸಿದು ಬಿದ್ದಿದ್ದ ಅವರನ್ನು ಬೆಂಗಳೂರಿನಲ್ಲಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿಗೆ ಕರೆತಂದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಸಂಜೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಅವರ ಸಹೋದರ ಹುಲಿ ವೇಷಧಾರಿ ಕಲಾವಿದ ಕಿಶೋರ್ ರಾಜ್ ಕಾಡಬೆಟ್ಟು ತಿಳಿಸಿದ್ದಾರೆ.
ನೂರಾರು ಮಂದಿಗೆ ಹುಲಿವೇಷ ತರಬೇತಿ ನೀಡುತ್ತಿದ್ದ ಅಶೋಕ್ ರಾಜ್ ಕಾಡಬೆಟ್ಟು ಕರಾವಳಿಯೆಲ್ಲೆಡೆ ಜನಪ್ರಿಯರಾಗಿದ್ದರು.
Thursday, 1 February 2024
ಖ್ಯಾತ ಹುಲಿವೇಷಧಾರಿ ಅಶೋಕ್ ರಾಜ್ ಕಾಡಬೆಟ್ಟು ಇನ್ನಿಲ್ಲ.
Wednesday, 24 January 2024
ಚುನಾವಣೆ ನಂತರ ರಾಹುಲ್ ಗಾಂಧಿಯವರನ್ನು ಬಂಧಿಸಲಾಗುವುದು: ಅಸ್ಸಾಂ ಸಿಎಂ
ಸಿಬ್ಸಾಗರ್: ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಆರೋಪದ ಮೇಲೆ ಎಫ್‌ಐಆರ್ ದಾಖಲಾಗಿರುವ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಲೋಕಸಭೆ ಚುನಾವಣೆ ನಂತರ ಬಂಧಿಸಲಾಗುವುದು ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮ ಬುಧವಾರ ಹೇಳಿದ್ದಾರೆ.
ಮಂಗಳವಾರ ನಡೆದ ಕಾಂಗ್ರೆಸ್ ಪಕ್ಷದ ‘ಭಾರತ್ ಜೋಡೋ ನ್ಯಾಯ್ ಯಾತ್ರೆ’ ವೇಳೆ ಅಸ್ಸಾಂ ಪೊಲೀಸರು ಸ್ವಯಂ ಪ್ರೇರಿತವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಇತರ ಹಲವು ನಾಯಕರ ವಿರುದ್ಧ “ಉದ್ದೇಶಪೂರ್ವಕ ಹಿಂಸಾಚಾರದ ಕೃತ್ಯಗಳ” ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.
“ನಾವು ಎಫ್‌ಐಆರ್ ದಾಖಲಿಸಿದ್ದೇವೆ. ವಿಶೇಷ ತನಿಖಾ ತಂಡ (ಎಸ್‌ಐಟಿ) ತನಿಖೆ ನಡೆಸಲಿದೆ ಮತ್ತು ಲೋಕಸಭೆ ಚುನಾವಣೆಯ ನಂತರ ರಾಹುಲ್ ಗಾಂಧಿಯವರನ್ನು ಬಂಧಿಸಲಾಗುವುದು ”ಎಂದು ಸಿಬ್ಸಾಗರ್ ಜಿಲ್ಲೆಯ ನಜೀರಾದಲ್ಲಿ ನಡೆದ ಕಾರ್ಯಕ್ರಮದ ಬಳಿಕ ಶರ್ಮಾ ಸುದ್ದಿಗಾರರಿಗೆ ಹೇಳಿಕೆ ನೀಡಿದ್ದಾರೆ.
”ಎಸ್‌ಐಟಿ ಮೂಲಕ ಸಮಗ್ರ ತನಿಖೆಗಾಗಿ ಪ್ರಕರಣವನ್ನು ಅಸ್ಸಾಂ ಸಿಐಡಿಗೆ ವರ್ಗಾಯಿಸಲಾಗಿದೆ” ಎಂದು ಪೊಲೀಸ್ ಮಹಾನಿರ್ದೇಶಕ ಜಿ.ಪಿ. ಸಿಂಗ್ ಹೇಳಿದ್ದಾರೆ.
ಅಸ್ಸಾಂ ನಲ್ಲಿ ನಡೆಯುತ್ತಿರುವ ಯಾತ್ರೆ ವೇಳೆ ಆಕ್ರೋಶ ಹೊರ ಹಾಕಿರುವ ರಾಹುಲ್ ಗಾಂಧಿ, ”ಹಿಮಂತ ಬಿಸ್ವಾ ಶರ್ಮಾ ದೇಶದ ಅತ್ಯಂತ ಭ್ರಷ್ಟ ಮುಖ್ಯಮಂತ್ರಿಯಾಗಿದ್ದು, ಅವರ ನಿಯಂತ್ರಕ ದೆಹಲಿಯಲ್ಲಿ ಕುಳಿತಿದ್ದಾರೆ. ಶರ್ಮಾ ಅವರಿಗೆ ರಾಹುಲ್ ಗಾಂಧಿಯನ್ನು ಹೆದರಿಸಬಹುದು ಎಂಬ ಕಲ್ಪನೆ ಎಲ್ಲಿಂದ ಬಂತು ಎಂದು ತಿಳಿದಿಲ್ಲ.ನನ್ನ ಮೇಲೆ ಎಷ್ಟು ಬೇಕೋ ಅಷ್ಟು ಕೇಸ್ ಹಾಕಲಿ ನನಗೆ ಭಯವಿಲ್ಲ ಎಂದು ತಿರುಗೇಟು ನೀಡಿದ್ದಾರೆ
Friday, 19 January 2024
ಗೋಕರ್ಣದಲ್ಲಿ ಪ್ರಭು ಶ್ರೀ ರಾಮ ತಪಸ್ಸು: ಬ್ರಹ್ಮ ಹತ್ಯೆ ದೋಷ ನಿವಾರಣೆಗೆ ರಾಮತೀರ್ಥ ದೇವಸ್ಥಾನ ಸ್ಥಾಪನೆ
ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಗೆ ಕ್ಷಣಗಣನೆ ಪ್ರಾರಂಭವಾಗಿದೆ. ಇತ್ತ ಪುರಾಣ ಪ್ರಸಿದ್ಧ ಗೋಕರ್ಣದಲ್ಲಿ ಶ್ರೀ ರಾಮ ಬ್ರಹ್ಮ ಹತ್ಯೆ ದೋಷ ನಿವಾರಣೆಗೆ ತಪಸ್ಸು ನಡೆಸಿದ ರಾಮ ತೀರ್ಥದಲ್ಲಿ ದೇವಸ್ಥಾನ ಜೀರ್ಣೋದ್ಧಾರದ ಜೊತೆ ಜೊತೆಗೆ ವಿಶೇಷ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.
ಸುಂದರ ಶಾಂತತೆಯ ಪರಿಸರ ಹೊಂದಿರುವ ಈ ರಾಮತೀರ್ಥ ಕ್ಷೇತ್ರ ಹೆಚ್ಚು ಪ್ರಚಲಿತವಿಲ್ಲ.
ಇನ್ನು ಬ್ರಾಹ್ಮಣನಾದ ರಾವಣನನ್ನು ರಾಮ ವಧಿಸಿದ ನಂತರ ಬ್ರಹ್ಮ ಹತ್ಯೆ ದೋಷ ನಿವಾರಣೆಗಾಗಿ ಇಲ್ಲಿಗೆ ಬಂದು ತಪಸ್ಸು ಆಚರಿಸಿದ ಎಂಬ ಪ್ರತೀತಿ ಇದೆ. ಈ ಪುಷ್ಕರಣಿಯನ್ನು ರಾಮ ತನ್ನ ಬಾಣದಿಂದ ಸೃಷ್ಟಿಸಿದ ಎಂಬ ಪುರಾಣ ಕಥೆ ಇದ್ದು ಸರ್ವ ಋತುವಿನಲ್ಲೂ ಸ್ಫಟಿಕದಂತೆ ಶುದ್ಧವಾಗಿ ಹರಿಯುತ್ತದೆ.
ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಇದ್ದು ಈ ವೇಳೆ ಈ ಪುರಾತನ ರಾಮಮಂದಿರದಲ್ಲಿ ವಿಶೇಷ ಪೂಜೆ ರಾಮ ಮೂರ್ತಿಯ ಪಲ್ಲಕ್ಕಿ ಉತ್ಸವ, ದೀಪೋತ್ಸವ ಸೇರಿದಂತೆ ಅನೇಕ ವಿಶೇಷ ಧಾರ್ಮಿಕ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.
Wednesday, 10 January 2024
Yuva Nidhi Scheme; ನಾಳೆ ಶಿವಮೊಗ್ಗದಲ್ಲಿ ಚಾಲನೆ.
ಯುವನಿಧಿ ಯೋಜನೆಯಡಿ 2023ನೇ ಸಾಲಿನಲ್ಲಿ ಪದವೀಧರರಿಗೆ ಮತ್ತು ಡಿಪ್ಲೊಮಾ ಉತ್ತೀರ್ಣರಾಗಿ ಉದ್ಯೋಗ ದೊರಕದ ಅಭ್ಯರ್ಥಿಗಳಿಗೆ ಪದವಿ ಅಭ್ಯರ್ಥಿಗಳಿಗೆ ಮಾಸಿಕ 3 ಸಾವಿರ ರೂ. ಹಾಗೂ ಡಿಪ್ಲೊಮಾ ಅಭ್ಯರ್ಥಿಗಳಿಗೆ ಮಾಸಿಕ 1,500 ರೂ. ನಿರುದ್ಯೋಗ ಭತ್ತೆಯನ್ನು ನೀಡಲಾಗುತ್ತದೆ.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೋಂದಣಿಗೆ ಉತ್ತಮ ಪ್ರತಿಕ್ರಿಯೆ ದೊರಕಿದ್ದು, ಈಗಾಗಲೇ 1,700ಕ್ಕೂ ಹೆಚ್ಚಿನ ಯುವಕ ಯುವತಿಯರು ಈ ಯೋಜನೆಯಡಿ ನೋಂದಾಯಿಸಿಕೊಂಡಿದ್ದಾರೆ.ಜ. 12ರಂದು ಸ್ವಾಮಿ ವಿವೇಕಾನಂದ ಜಯಂತಿಯ ಪ್ರಯುಕ ¤ರಾಷ್ಟ್ರೀಯ ಯುವ ದಿನದಂದು ಶಿವಮೊಗ್ಗ ಫ್ರೀಡಂ ಪಾರ್ಕ್‌ನಲ್ಲಿ ಮುಖ್ಯಮಂತ್ರಿಗಳ ಉಪಸ್ಥಿತಿಯಲ್ಲಿ ಯುವ ನಿಧಿ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆ ಕಾರ್ಯಕ್ರಮ ನಡೆಯಲಿದೆ. ಜಿಲ್ಲೆಯಲ್ಲಿ ಈ ಯೋಜನೆಯಡಿ ನೋಂದಾಯಿಸಿರುವ ಅಭ್ಯರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಜಿಲ್ಲಾ ಉದ್ಯೋಗಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Tuesday, 9 January 2024
ಸರ್ಕಾರಿ ಬಂಗಲೆ ಖಾಲಿ ಮಾಡದ ಮಾಜಿ ಸಂಸದೆ ಮಹುವಾ ಮೊಯಿತ್ರಾಗೆ ನೋಟಿಸ್ ಜಾರಿ
![]() |
ಸರ್ಕಾರಿ ಬಂಗಲೆಯನ್ನು ತೆರವು ಮಾಡದಿದ್ದಕ್ಕಾಗಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮಾಜಿ ಸಂಸದೆ ಮಹುವಾ ಮೊಯಿತ್ರಾ ಅವರಿಗೆ ಎಸ್ಟೇಟ್ ನಿರ್ದೇಶನಾಲಯ (ಡಿಒಇ) ಸೋಮವಾರ ಶೋಕಾಸ್ ನೋಟಿಸ್ ನೀಡಿದೆ. ನಗರ ವಸತಿ ಮತ್ತು ನಗರಾಭಿವೃದ್ಧಿ ಸಚಿವಾಲಯದ ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಪಿಟಿಐ ಈ ಮಾಹಿತಿಯನ್ನು ನೀಡಿದೆ.ಕಳೆದ ವರ್ಷ ಡಿಸೆಂಬರ್ 8 ರಂದು ತೃಣಮೂಲ ಕಾಂಗ್ರೆಸ್ ಸಂಸದೆ ಮೊಯಿತ್ರಾ ಅವರನ್ನು ಲೋಕಸಭೆಯಿಂದ ಉಚ್ಚಾಟಿಸಲಾಗಿತ್ತು. ಅವರ ಖಾತೆಯನ್ನು ರದ್ದುಗೊಳಿಸಿದ್ದರಿಂದ ಜನವರಿ 7 ರೊಳಗೆ ಬಂಗಲೆಯನ್ನು ಖಾಲಿ ಮಾಡುವಂತೆ ತಿಳಿಸಲಾಯಿತು. ಆದರೆ ಇದುವರೆಗೂ ಬಂಗಲೆ ಖಾಲಿ ಮಾಡದ ಕಾರಣ ಶೋಕಾಸ್ ನೋಟಿಸ್ ನೀಡಿದ್ದು 3 ದಿನಗಳಲ್ಲಿ ಉತ್ತರಿಸುವಂತೆ ಎಸ್ಟೇಟ್ ನಿರ್ದೇಶನಾಲಯ ಕೇಳಿದೆ.ಮೊಯಿತ್ರಾ ಅವರಿಗೆ ನೀಡಲಾದ ಶೋಕಾಸ್ ನೊಟೀಸ್ ನಲ್ಲಿ ಸರ್ಕಾರಿ ಬಂಗಲೆಯನ್ನು ಏಕೆ ಇನ್ನೂ ತೆರವು ಮಾಡಿಲ್ಲ ಎಂದು ಕೇಳಲಾಗಿದ್ದು ಇದಕ್ಕೆ ಉತ್ತರ ನೀಡುವಂತೆ ಕೇಳಿದೆ.
ರಾಜ್ಯ4 ವರ್ಷದ ಮಗುವನ್ನು ಕೊಂದು ಬ್ಯಾಗ್ ನಲ್ಲಿ ಕೊಂಡೊಯ್ಯುತ್ತಿದ್ದ ಸಿಇಒ ಸುಚನಾ ಬಂಧನ
ಗೋವಾದಲ್ಲಿ ತನ್ನ 4 ವರ್ಷದ ಮಗನನ್ನು ಕೊಂದು ಶವವನ್ನು ಬ್ಯಾಗ್ ನಲ್ಲಿಟ್ಟು ಕರ್ನಾಟಕಕ್ಕೆ ಪ್ರಯಾಣಿಸುತ್ತಿದ್ದ ಬೆಂಗಳೂರಿನ ಕೃತಕ ಬುದ್ಧಿಮತ್ತೆ ಸ್ಟಾರ್ಟ್ ಅಪ್ ಕಂಪನಿಯ ಸಿಇಒ ಸುಚನಾ ಸೇಠ್ (39ವರ್ಷ) ಎಂಬಾಕೆಯನ್ನು ಚಿತ್ರದುರ್ಗದಲ್ಲಿ ಬಂಧಿಸಿರುವ ಘಟನೆ ವರದಿಯಾಗಿದೆ.ಬೆಂಗಳೂರಿನ ಮೈಂಡ್ ಫುಲ್ AI ಲ್ಯಾಬ್ ಸ್ಟಾರ್ಟ್ ಅಪ್ ನ ಸಿಇಒ ಸುಚನಾ ಸೇಠ್ ಎಂಬಾಕೆಯನ್ನು ಸೋಮವಾರ ಚಿತ್ರದುರ್ಗದ ಬಳಿ ಆಕೆಯ ಮಗನ ಶವವಿದ್ದ ಬ್ಯಾಗ್ ಜತೆಗೆ ಬಂಧಿಸಲಾಗಿದೆ. ಉತ್ತರ ಗೋವಾದ ಕ್ಯಾಂಡೋಲಿಮ್ ಅಪಾರ್ಟ್ ಮೆಂಟ್ ನಲ್ಲಿ ತನ್ನ ಮಗನನ್ನು ಹತ್ಯೆಗೈದಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಉತ್ತರ ಗೋವಾದ ಕ್ಯಾಂಡೋಲಿಮ್ ನಲ್ಲಿರುವ ಸೋಲ್ ಬನ್ಯಾನ್ ಗ್ರಾಂಡೆ ಅಪಾರ್ಟ್ ಮೆಂಟ್ ಗೆ ಸುಚನಾ ಸೇಠ್ ತನ್ನ ಮಗನೊಂದಿಗೆ ಶನಿವಾರ ಚೆಕ್ ಇನ್ ಆಗಿದ್ದಳು. ಸೋಮವಾರ ಸೇಠ್ ರೂಂ ಚೆಕ್ ಔಟ್ ಮಾಡಿದ್ದು, ಸಿಬಂದಿ ಬಳಿ ಬೆಂಗಳೂರಿಗೆ ತೆರಳಲು ಕಾರು ಬುಕ್ ಮಾಡಲು ಹೇಳಿದ್ದಳು. ಕಾರು ಬೇಡ, ವಿಮಾನದಲ್ಲಿ ತೆರಳಿ ಎಂಬ ಸಿಬಂದಿಗಳ ಸಲಹೆಯನ್ನು ಆಕೆ ತಿರಸ್ಕರಿಸಿದ್ದಳಂತೆ!ಈ ಸಂದರ್ಭದಲ್ಲಿ ಸುಚನಾ ಸೇಠ್ ಜತೆ ಮಗು ಇಲ್ಲದಿರುವುದನ್ನು ಅಪಾರ್ಟ್ ಮೆಂಟ್ ಸಿಬಂದಿಗಳು ಗಮನಿಸಿದ್ದರು. ಆಕೆ ಕಾರಿನಲ್ಲಿ ಹೊರಟು ಹೋದ ನಂತರ ಹೌಸ್ ಕೀಪರ್ ರೂಂ ಅನ್ನು ಪರಿಶೀಲಿಸಿದಾಗ ರಕ್ತದ ಕಲೆಗಳು ಬಿದ್ದಿರುವುದು ಗಮನಕ್ಕೆ ಬಂದಿತ್ತು.
ಕೂಡಲೇ ಈ ಬಗ್ಗೆ ಗೋವಾ ಪೊಲೀಸರಿಗೆ ಮಾಹಿತಿ ನೀಡಿದ್ದರು. ಅದರಂತೆ ಕಾರು ಚಾಲಕನಿಗೆ ಕರೆ ಮಾಡಿ, ಸೇಠ್ ಬಳಿ ಮಗು ಎಲ್ಲಿ ಎಂದು ಪ್ರಶ್ನಿಸಿದ್ದರು. ಆಗ ಆಕೆ ಆತನನ್ನು ಗೆಳೆಯನ ಜತೆ ಬಿಟ್ಟಿರುವುದಾಗಿ ಹೇಳಿ, ವಿಳಾಸ ಕೊಟ್ಟಿದ್ದಳು. ಪೊಲೀಸರು ವಿಳಾಸ ಹುಡುಕಿದಾಗ ಅದು ನಕಲಿ ಎಂದು ತಿಳಿಯಿತು.!
ಗೋವಾ ಪೊಲೀಸರು ಮತ್ತೆ ಕಾರು ಚಾಲಕನಿಗೆ ಕರೆ ಮಾಡಿದ್ದರು. ಆದರೆ ಈ ಬಾರಿ ಅವರು ಸುಚನಾಳಿಗೆ ಅರ್ಥವಾಗಬಾರದು ಎಂದು ಚಾಲಕನ ಬಳಿ ಕೊಂಕಣಿ ಭಾಷೆಯಲ್ಲಿ ಸಂಭಾಷಣೆ ನಡೆಸಿ, ಕಾರನ್ನು ಸಮೀಪದ ಚಿತ್ರದುರ್ಗ ಠಾಣೆಗೆ ಕೊಂಡೊಯ್ಯುವಂತೆ ಸೂಚನೆ ನೀಡಿದ್ದರು!
ನಂತರ ಚಾಲಕ ಕಾರನ್ನು ನೇರವಾಗಿ ಚಿತ್ರದುರ್ಗ ಪೊಲೀಸ್ ಠಾಣೆಗೆ ಕೊಂಡೊಯ್ದಿದ್ದ. ಬಳಿಕ ಪೊಲೀಸರು ಸುಚನಾ ಸೇಠ್ ಳನ್ನು ಬಂಧಿಸಿದ್ದರು. ಕಾರಿನೊಳಗೆ ಇದ್ದ ಬ್ಯಾಗ್ ನಲ್ಲಿ ಮಗುವಿನ ಶವ ಪತ್ತೆಯಾಗಿತ್ತು.
AI ಡೆವಲಪರ್, ಸೇಠ್ ಪತಿ ವೆಂಕಟ ರಾಮನ್ ಚಿತ್ರದುರ್ಗಕ್ಕೆ ಆಗಮಿಸಿದ್ದು, ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸುಚನಾ ಸೇಠಳನ್ನು ಹೆಚ್ಚಿನ ತನಿಖೆಗಾಗಿ ಗೋವಾಕ್ಕೆ ಕರೆ ತರಲಾಗಿದೆ
“ನಾವೆಲ್ಲರೂ ಹಿಂದುಗಳು…….”: ರಾಮಮಂದಿರ ಉದ್ಘಾಟನೆ ಕುರಿತು ಡಿಸಿಎಂ ಹೇಳಿಕೆ ಹೀಗಿದೆ.
ಕೇರಳಕ್ಕೆ ಭೇಟಿ ಕೊಟ್ಟ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಜನವರಿ 22ರಂದು ಅಯೋಧ್ಯೆಯಲ್ಲಿ ಅದ್ದೂರಿಯಾಗಿ ನಡೆಯಲಿರುವ ರಾಮಮಂದಿರದ ಶಂಕುಸ್ಥಾಪನೆ ಸಮಾರಂಭವನ್ನು ರಾಜ್ಯದಲ್ಲಿ ಆಚರಿಸುವ ಕುರಿತು ಕರ್ನಾಟಕ ಸರ್ಕಾರ ಮಾಡಿದ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದು, ಅಂತಿಮವಾಗಿ ನಾವೆಲ್ಲರೂ ಹಿಂದೂಗಳು ಎಂದು ಹೇಳಿದ್ದಾರೆ.ರಾಮಚಂದ್ರನ್ ಪ್ರತಿಷ್ಠಾನದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಳ್ಳಲು ಕೇರಳ ರಾಜ್ಯ ರಾಜಧಾನಿಗೆ ಆಗಮಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು ಡಿಕೆಶಿ, “ಅಂತಿಮವಾಗಿ ನಾವೆಲ್ಲರೂ ಹಿಂದೂಗಳು. ಬಿಜೆಪಿ ಆಡಳಿತದಲ್ಲಿರುವ ಕೇಂದ್ರವು ಈ ಸಮಾರಂಭದಲ್ಲಿ ಯಾರನ್ನು ಆಯ್ಕೆ ಮಾಡಬೇಕೆಂದು ನಿರ್ಧರಿಸಲು ಆಯ್ಕೆ ವಿಧಾನವನ್ನು ಅನುಸರಿಸುತ್ತಿದೆ” ಎಂದರು.ರಾಮಮಂದಿರ ಖಾಸಗಿ ಆಸ್ತಿಯಲ್ಲ. ಅದು ಸಾರ್ವಜನಿಕ ಆಸ್ತಿ. ದೇಶದಲ್ಲಿ ಹಲವಾರು ನಾಯಕರು ಮತ್ತು ಮುಖ್ಯಮಂತ್ರಿಗಳಿದ್ದಾರೆ. ಪ್ರತಿಯೊಂದು ಧರ್ಮ ಮತ್ತು ಚಿಹ್ನೆಯು ಯಾವುದೇ ವ್ಯಕ್ತಿಗೆ ಸೇರಿಲ್ಲ. ನಾವು ಎಲ್ಲಾ ಜನರ ಭಾವನೆಗಳನ್ನು ಗೌರವಿಸುತ್ತೇವೆ” ಎಂದು ಹೇಳಿದರು.
ಬೆಂಗಳೂರು – ಮಂಗಳೂರು ಬಸ್ಸು ತಡೆದು ಮಾರಕಾಸ್ತ್ರದಿಂದ ಹಲ್ಲೆ- ಪುಡಿ ರೌಡಿಯ ಕಾಲಿಗೆ ಗುಂಡೇಟು, ಅರೆಸ್ಟ್
ಹಾಸನ: ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ತಡೆದು ಲಾಂಗ್‌ನಿಂದ ಹಲ್ಲೆ ಮಾಡಿ ಅಟ್ಟಹಾಸ ಮೆರೆದಿದ್ದ ಪುಡಿರೌಡಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘ...
-
ಕೇರಳಕ್ಕೆ ಭೇಟಿ ಕೊಟ್ಟ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಜನವರಿ 22ರಂದು ಅಯೋಧ್ಯೆಯಲ್ಲಿ ಅದ್ದೂರಿಯಾಗಿ ನಡೆಯಲಿರುವ ರಾಮಮಂದಿರದ ಶಂಕುಸ್ಥಾಪನೆ ಸಮಾರಂಭವನ್ನು ರಾಜ್ಯದ...
-
ಪುತ್ತೂರು ಸೆಪ್ಟೆಂಬರ್ 24: ಅಂಬ್ಯುಲೆನ್ಸ್ ಗೆ ಪಿಕಪ್ ವೊಂದು ಡಿಕ್ಕಿ ಹೊಡೆದ ಘಟನೆ ಘಟನೆ ಪುತ್ತೂರು ತಾಲೂಕಿನ ಮುರ ಎಂಬಲ್ಲಿ ಸೋಮವಾರ ತಡರಾತ್ರಿ ನಡೆದಿರುವ ಬಗ್ಗೆ ವರದ...
-
ಹೊಸದಿಲ್ಲಿ: ಕೋಲ್ಕತಾದ ಆರ್ಜಿ ಕಾರ್ ಆಸ್ಪತ್ರೆಯಲ್ಲಿ ನಡೆದ ವೈದ್ಯೆ ಅತ್ಯಾಚಾರ-ಹತ್ಯೆ ಪ್ರಕರಣ ಸಂಬಂಧ ರಾಷ್ಟ್ರಪತಿ ದ್ರೌಪದಿ ಮುರ್ಮು ಮೊದಲ ಬಾರಿ ಪ್ರತಿಕ್ರಿಯೆ ನೀಡಿದ...






